ಭಾರೀ ಮಳೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಜಲಾವೃತ

Public TV
1 Min Read

ಬೆಳಗಾವಿ: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಕೂಡ ವರುಣ ಆರ್ಭಟಿಸುತ್ತಿದ್ದಾನೆ. ಜಡಿ ಮಳೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಜಲಾವೃತವಾಗಿದೆ.

ಜಿಲ್ಲೆಯಲ್ಲಿರುವ ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಖಾನಾಪುರ ಪಟ್ಟಣಕ್ಕೆ ನೀರು ನುಗ್ಗುತ್ತಿದೆ. ಖಾನಾಪುರ ಪಟ್ಟಣದ ಹೊರವಲಯದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.

ಖಾನಾಪುರ ಪಟ್ಟಣದ ಹೊರವಲಯದ ಮೀನಿನ ಮಾರುಕಟ್ಟೆಗೆ ನೀರು ನುಗ್ಗಿದ್ದು, ನಿರಂತರ ಮಳೆಯಿಂದ ಖಾನಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕೆಎಸ್‍ಆರ್‍ಪಿ ತರಬೇತಿ ಕೇಂದ್ರದ ಮೈದಾನ ಜಲಾವೃತವಾಗಿದೆ. ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶವೂ ಜಲಾವೃತಗೊಂಡಿದೆ. ಇದನ್ನೂ ಓದಿ: ಕೊರೊನಾ ಕಾಲದಲ್ಲೂ ಮಾದಪ್ಪನಿಗೆ ಹಣದ ಹೊಳೆ – 47 ದಿನದಲ್ಲಿ 2.33 ಕೋಟಿ ಸಂಗ್ರಹ

ವಡಗಾವಿಯ ಕೇಶವ ನಗರದಲ್ಲಿ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇರದ ಹಿನ್ನೆಲೆ ಮನೆಗಳಿಗೆ ನುಗ್ಗಿದ ಮಳೆನೀರು ನುಗ್ಗಿದೆ. ಪ್ರತಿ ಬಾರಿ ಮಳೆಯಾದಾಗ ಸಾರ್ವಜನಿಕರು ಇದೇ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸದ್ಯ ಸಾರ್ವಜನಿಕರು ಮನೆ ಬಿಟ್ಟು ಹೊರಬಂದಿಲ್ಲ.

ನೆಲಮಹಡಿಯಲ್ಲಿ ವಾಸವಿದ್ದ ಜನರು ಬೇರೆಡೆ ಸ್ಥಳಾಂತರಗೊಂಡಿದ್ದಾರೆ. ರಾತ್ರೋರಾತ್ರಿ ಮನೆಗೆ ನೀರು ನುಗ್ಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ನಗರ ನಿವಾಸಿಗಳು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *