ಮಂಗಳೂರಿನ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಬೊಮ್ಮಾಯಿ

Public TV
1 Min Read

ಮಂಗಳೂರು: ನಗರದ ಉರ್ವಾಸ್ಟೋರ್ ನಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್ ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಲೋಕಾರ್ಪಣೆ ಮಾಡಿದರು.

ಕಳೆದ ಕೆಲ ವರ್ಷಗಳ ಬೇಡಿಕೆಯಾಗಿದ್ದ, ಈ ಅಂಬೇಡ್ಕರ್ ಭವನ ನಿರ್ಮಾಣಗೊಂಡು ವರ್ಷ ಕಳೆದರೂ ಉದ್ಘಾಟನಾ ಭಾಗ್ಯ ಸಿಕ್ಕಿರಲಿಲ್ಲ. ಇದೀಗ ನೂತನ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಆಗಿಮಿಸಿದ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರಾದ ಸುಧಾಕರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *