ಮಗನನ್ನ ಎತ್ತಿಕೊಂಡು ನೋಡುತ್ತಾ ನಗು ಬೀರಿದ ಹಾರ್ದಿಕ್ ಪಾಂಡ್ಯ

Public TV
1 Min Read

ಮುಂಬೈ: ಟೀ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ತಂದೆಯಾಗಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಇದೀಗ ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ.

ಹಾರ್ದಿಕ್ ಪಾಂಡ್ಯ ಹಾಗೂ ಬಿಗ್ ಬಾಸ್‍ನ ಮಾಜಿ ಸ್ಪರ್ಧಿ ಹಾಗೂ ಡಾನ್ಸರ್ ನತಾಶಾ ಸ್ಟಾಂಕೋವಿಕ್ ದಂಪತಿಗೆ ಗುರುವಾರ ಗಂಡು ಮಗುವಾಗಿದೆ. ಗಂಡು ಮಗುವಿನ ತಂದೆಯಾದ ಖುಷಿಯನ್ನು ಪಾಂಡ್ಯ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ನಮಗೆ ಗಂಡು ಮಗುವಿನ ಆಗಮನವಾಗಿದೆ ಎಂದು ಬರೆದುಕೊಂಡಿದ್ದರು. ಜೊತೆಗೆ ಪಾಂಡ್ಯ ಮಗುವಿನ ಕೈ ಹಿಡಿದುಕೊಂಡಿದ್ದು, ಪುತ್ರನ ಮುಖ ಕಾಣದ ಫೋಟೋವನ್ನು ಅಪ್ಲೋಡ್ ಮಾಡಿದ್ದರು.

ಇಂದು ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ತಮ್ಮ ಮಗನನ್ನು ಎರಡು ಕೈಗಳಿಂದ ಎತ್ತಿಕೊಂಡಿದ್ದು, ಮಗುವಿನ ಮುಖ ನೋಡುತ್ತಾ ಪಾಂಡ್ಯ ನಗುತ್ತಿದ್ದಾರೆ. ಈ ಫೋಟೋಗೆ “ದೇವರಿಂದ ಆಶೀರ್ವಾದ” ಎಂದು ಬರೆದಿದ್ದು, ನಮಸ್ಕಾರ ಮಾಡುವ ಮತ್ತು ಹಾರ್ಟ್ ಎಮೋಜಿಯನ್ನು ಹಾಕಿ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಪಾಂಡ್ಯ ಫೋಟೋ ಅಪ್ಲೋಡ್ ಮಾಡಿದ ಒಂದು ಗಂಟೆಯಲ್ಲಿ 13 ಲಕ್ಷಕ್ಕೂ ಅಧಿಕ ಮಂದಿ ಲೈಕ್ಸ್ ಮಾಡಿದ್ದಾರೆ. ಜೊತೆ ಹಾರ್ದಿಕ್ ಪಾಂಡ್ಯಗೆ ಶುಭಾ ಕೋರುತ್ತಿದ್ದಾರೆ.

https://www.instagram.com/p/CDVV1ZCF7E0/?igshid=ic8h14s09fe1

ಬಹು ಸಮಯದಿಂದ ಒಟ್ಟಿಗೆ ಓಡಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಸರ್ಬಿಯನ್ ಮಾಡೆಲ್, ನಟಿ ನತಾಶಾ ಸ್ಟಾಂಕೋವಿಕ್ ಹೊಸ ವರ್ಷದ ಮೊದಲ ದಿನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಕುರಿತ ವಿಡಿಯೋ ಹಾಗೂ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದರು.

https://www.instagram.com/p/CDQx8yCF-SX/?igshid=ig4lrbzelwkj

ಮೇ 31 ರಂದು ಸೋಶಿಯಲ್ ಮೀಡಿಯಾದ ಮೂಲಕ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವ ಬಗ್ಗೆ ರಿವೀಲ್ ಮಾಡಿದ್ದರು. ಈ ಕುರಿತು ಇನ್‍ಸ್ಟಾದಲ್ಲಿ ಗೆಳತಿ ನತಾಶಾರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದ ಪಾಂಡ್ಯ, “ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂಧವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ. ನಮ್ಮ ಜೀವನದ ಈ ಹೊಸ ಹಂತಕ್ಕಾಗಿ ರೋಮಾಂಚನಗೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತೇವೆ” ಎಂದು ಬರೆದುಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *