ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

Public TV
1 Min Read

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್‍ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ.

ಈ ಹಿಂದೆ ಕೊರೊನಾ ಲಾಕ್‍ಡೌನ್‍ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

ಈ ವಿಚಾರವಾಗಿ ರಾಜ್ಯ ಅಬಕಾರಿ ಇಲಾಖೆ ಇಂದು ಸುತ್ತೋಲೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬೆಳಗ್ಗೆ 9ರಿಂದ ಸಂಜೆ 9ರವರಗೆ ಮದ್ಯದಂಗಡಿಗಳನ್ನು ತೆರೆಯಬಹುದು ಎಂದು ಹೇಳಿದೆ. ಈ ಮೂಲಕ ಇರುವ ಸ್ಟಾಕ್‍ಗಳನ್ನು ಖಾಲಿ ಮಾಡುವಂತೆ ಸೂಚಿಸಿ ಎರಡು ಗಂಟೆಗಳ ಹೆಚ್ಚುವರಿ ಸಮಯವನ್ನು ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *