ವರುಣಾರ್ಭಟಕ್ಕೆ ಮೃತಪಟ್ಟ 138 ಮಂದಿಯ ಕುಟುಂಬಕ್ಕೆ 2 ಲಕ್ಷ ಪರಿಹಾರ

Public TV
2 Min Read

– ಗಾಯಗೊಂಡವರಿಗೆ 50 ಸಾವಿರ ರೂ.

ಮುಂಬೈ: ಭಾರೀ ಮಳೆಯಿಂದಾಗಿ 138 ಮಂದಿ ಸಾವನ್ನಪ್ಪಿದ್ದು, 90 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಕಳೆದೊಂದು ವಾರದಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಥಾಣೆ, ಪುಣೆ, ರಾಯಘಡ ಮುಂತಾದ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮಳೆ ಮತ್ತು ಭೂಕುಸಿತದಿಂದ ಇದುವರೆಗೂ 138 ಜನರು ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯೊಂದರಲ್ಲೇ ಭೂಕುಸಿತದಿಂದ 36 ಜನರು ಸಾವನ್ನಪ್ಪಿದ್ದಾರೆ. ಮುಂಬೈನ ಗೋವಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು ಇದರಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಜನರು ಗಾಯಗೊಂಡಿದ್ದಾರೆ. ಸತಾರ ಜಿಲ್ಲೆಯಲ್ಲಿ ಮಳೆಯಿಂದ 27 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಮಳೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 9ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕೊಂಕಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

 

ಮಳೆಗೆ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಫೋನ್ ಮಾಡಿರುವ ರಾಷ್ಟ್ರಪತಿ ಕೋವಿಂದ್ ಮಹಾರಾಷ್ಟ್ರದ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ:  ರಣ ಮಳೆಗೆ ಮಹಾರಾಷ್ಟ್ರದಲ್ಲಿ 100 ಮಂದಿ ಬಲಿ- 1,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಮಹಾರಾಷ್ಟ್ರದ ರಾಯಘಡದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚುವರಿಯಾಗಿ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಗಳ ಕಚೇರಿ ಘೋಷಿಸಿದೆ. ಭೂಕುಸಿತದಲ್ಲಿ ಗಾಯಗೊಂಡಿರುವವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *