ಮುಂದಿನ ಸರ್ಕಾರ ಜೆಡಿಎಸ್ ಸರ್ಕಾರ : ನಿಖಿಲ್ ಕುಮಾರಸ್ವಾಮಿ

Public TV
1 Min Read

ಮಂಡ್ಯ: ಮುಂದಿನ ಸಲ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದ ಕೊಪ್ಪದಲ್ಲಿ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ಸಲ ಕುಮಾರಣ್ಣನ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುವ ಹೆಚ್ಚಿನ ಸಾಧ್ಯತೆ ಕಾಣುತ್ತಿದೆ. ಕುಮಾರಣ್ಣನವರ ಜೊತೆ ಎರಡು-ಮೂರು ಕಾರ್ಯಕ್ರಮಗಳಿಗೆ ಹೋಗಿದ್ದೆ. ಆಗ ಆರೋಗ್ಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಹಾಗೂ ಸಂಬಳ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿದರು ಎಂದರು.

ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾದ ಯೋಜನೆಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ

ಇನ್ನೂ ಎರಡೂ-ಮೂರು ವರ್ಷ ಮೈತ್ರಿ ಸರ್ಕಾರ ಇದ್ದಿದ್ದರೆ ತಮ್ಮನ್ನು ಕೂಡ ಗುರುತಿಸುವ ಕೆಲಸ ಆಗುತ್ತಿತ್ತು. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಹೈಕಮಾಂಡ್ ಡೆಲ್ಲಿಯಲ್ಲಿದೆ. ಆದ್ರೆ, ಜನರೇ ಕುಮಾರಸ್ವಾಮಿ ಅವರ ಹೈಕಮಾಂಡ್. ನಮ್ಮ ಕುಮಾರಣ್ಣ ಹೈಕಮಾಂಡ್ ಅಂತ ಅನ್ಕೊಂಡಿರೋದು ಜನರನ್ನ. ಮುಂದಿನ ದಿನಗಳಲ್ಲಿ ಜನರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಜನರ ಸೇವೆಯನ್ನು ನಮ್ಮ ಪಕ್ಷ ಸದಾ ಮಾಡುತ್ತದೆ ಎಂದು ನಿಖಿಲ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *