ಮೂರನೇ ಅಲೆ ಆತಂಕ- ಮಕ್ಕಳ ರಕ್ಷಣೆಗೆ ಮೊದಲ ಪ್ರಾಶಸ್ತ್ಯ, ಸಚಿವ ಡಾ. ಸುಧಾಕರ್

Public TV
1 Min Read

ಉಡುಪಿ: ಆರೋಗ್ಯ ಸಚಿವ ಡಾ. ಸುಧಾಕರ್ ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಕಾರ್ಕಳ ತಾಲೂಕಿನ ಬೆಳಣ್ಣುವಿನಲ್ಲಿ ವಾತ್ಸಲ್ಯ ಕಾರ್ಯಕ್ರಮದಲ್ಲಿ ಭಾಗಿಯಾದರು. ಇಡೀ ರಾಜ್ಯದ ಮಕ್ಕಳ ಆರೋಗ್ಯ ತಪಾಸಣೆ ನಡೆಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದರು.

ಮಹಾಮಾರಿ ಕೊರೊನಾದ ಎರಡನೇ ಅಲೆ ಕೊಂಚ ಕಡಿಮೆಯಾಗುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಮೂರನೇ ಅಲೆ ರಾಜ್ಯಕ್ಕೆ ಅಪ್ಪಳಿಸುತ್ತದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಜಿಲ್ಲಾ, ರಾಜ್ಯ ಮಟ್ಟದಲ್ಲಿ ಅಧಿಕಾರಿಗಳು ವೈದ್ಯರು ತಜ್ಞರು ಮತ್ತು ಜನಪ್ರತಿನಿಧಿಗಳ ಸಭೆ ನಡೆಯುತ್ತಿದೆ. ಈ ನಡುವೆ ಆರೋಗ್ಯ ಸಚಿವ ಸುಧಾಕರ್ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಸರಣಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.

ಬೆಳ್ಮಣ್ಣಿನಲ್ಲಿ ನಡೆದ ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಸಚಿವರು ಉದ್ಘಾಟನೆ ಮಾಡಿದರು. ವೈದ್ಯರು ಮತ್ತು ಜನಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರದ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ ಮನೆಗಳಲ್ಲಿ ಪೋಷಕರು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ನೀಡುವ ಬಗ್ಗೆ ಹೆಚ್ಚು ಒತ್ತು ಕೊಡಬೇಕು. ಸಾರ್ವಜನಿಕವಾಗಿ ನೂರಾರು ಜನ ಸಂಪರ್ಕಿಸುವ ಕಾರ್ಯಕ್ರಮಗಳಿಂದ ಮಕ್ಕಳನ್ನು ದೂರ ಇಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಉಡುಪಿಯಲ್ಲಿ ಗಾಳಿ ಮಳೆ- ಪ್ರವಾಸಿಗರಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

ಕಾರ್ಕಳ ಶಾಸಕ ಸುನಿಲ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಡಾ. ವೈ. ನವೀನ್ ಭಟ್, ಡಿಎಚ್‍ಒ ಡಾ. ನಾಗಭೂಷಣ ಉಡುಪ, ವಾತ್ಸಲ್ಯ ಸಂಯೋಜಕ ಸುಮಿತ್ ಶೆಟ್ಟಿ, ಜಿ.ಪಂ ಸದಸ್ಯೆ ರೇಷ್ಮಾ ಉದಯ್, ತಹಶೀಲ್ದಾರ್ ಪ್ರಕಾಶ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *