ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ಗೆ ರಾಜ್ಯದಲ್ಲಿ ಇದೂವರೆಗೆ 64 ಮಂದಿ ಮೃತಪಟ್ಟಿದ್ದು, ಇದೀಗ ಬೆಂಗಳೂರಲ್ಲಿ ಮತ್ತೊಂದು ಬಲಿಯಾಗಿದೆ.
ಚಾಮರಾಜ ಪೇಟೆಯ ನಿವಾಸಿ 57 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಬಳಿಕ ಇವರ ಕೊರೊನಾ ಟೆಸ್ಟ್ ರಿಪೋರ್ಟ್ ಬಂದಿದೆ. ಅದರಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ.
ವೃದ್ಧ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಚಿಕಿತ್ಸೆ ನೀಡುವುದಕ್ಕೂ ಮುನ್ನ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ರಿಸಲ್ಟ್ ಬರುವುದಕ್ಕೂ ಮುನ್ನವೇ ವೃದ್ಧ ಮೃತಪಟ್ಟಿದ್ದಾರೆ.
ಸೋಮವಾರ ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಂಗಳೂರಿನಲ್ಲಿ ಮೂರು ಮಂದಿ ಮೃತಪಟ್ಟಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 64ಕ್ಕೆ ಏರಿಕೆಯಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 67 ವರ್ಷದ ವ್ಯಕ್ತಿ ಸೋಮವಾರ ಮೃತಪಟ್ಟಿದ್ದಾರೆ.
ಉಸಿರಾಟದ ತೊಂದರೆ, ಜ್ವರ, ನಿಶಕ್ತಿಯಿಂದ ಬಳಲುತ್ತಿದ್ದ ಬೆಂಗಳೂರು ನಗರದ 48 ವರ್ಷದ ಮಹಿಳೆ ಜೂನ್ 4 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಜೂನ್ 5 ರಂದು ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 65 ವರ್ಷದ ಬೆಂಗಳೂರಿನ ಮಹಿಳೆ ಜೂನ್ 4 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 5 ರಂದು ಇನ್ನೊಂದು ಆಸ್ಪತ್ರೆಗೆ ಶಿಫ್ಟ್ ಆಗಿದ್ದು ಅಲ್ಲೇ ನಿಧನರಾಗಿದ್ದಾರೆ.