ರಾಜೀನಾಮೆ ಸುದ್ದಿ ಕೇಳಿ ಅಭಿಮಾನಿ ಆತ್ಮಹತ್ಯೆ – ಬಿಎಸ್‍ವೈ ಸಂತಾಪ

Public TV
1 Min Read

– ಅಭಿಮಾನ ಅತಿರೇಕಕ್ಕೆ ಹೋಗಬಾರದು

ಬೆಂಗಳೂರು: ತಮ್ಮ ರಾಜೀನಾಮೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಅಭಿಮಾನಿ ಸಾವಿಗೆ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಯಡಿಯೂರಪ್ಪನವರು ಧೈರ್ಯ ಹೇಳಿದ್ದಾರೆ.

ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನು. ನಿನ್ನೆ ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣದಿಂದ ಸಾಕಷ್ಟು ನೊಂದಿದ್ದ. ನಿನ್ನೆ ಹೋಟೆಲಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಸಿಎಂ ಸ್ಥಾನ ಸಾಧ್ಯತೆ!

ಸೋಮವಾರ ಸರ್ಕಾರ ಎರಡನೇ ವರ್ಷದ ಸಂಭ್ರಮಾಚರಣೆ ವೇದಿಕೆಯಲ್ಲಿ ಯಡಿಯೂರಪ್ಪನವರು ರಾಜೀನಾಮೆ ನೀಡುವದಾಗಿ ಘೋಷಣೆ ಮಾಡಿದ್ದರು. ತಮ್ಮ ಭಾಷಣದ ವೇಳೆ ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ನೆನೆದು ಭಾವುಕರಾಗಿ ಕಣ್ಣೀರಿಟ್ಟಿದ್ದರು. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿ, ಮುಂದೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವದಾಗಿ ತಿಳಿಸಿದರು. ಇದೇ ವೇಳೆ ರಾಜೀನಾಮೆಗೆ ದೆಹಲಿಯಿಂದ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸ್ವಪ್ರೇರಣೆಯಿಂದ ಸಿಎಂ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಯಡಿಯೂರಪ್ಪ ಸಂಪುಟ ವಿಸರ್ಜನೆ – ಸಚಿವರೆಲ್ಲ ಮಾಜಿ

Share This Article
Leave a Comment

Leave a Reply

Your email address will not be published. Required fields are marked *