-ಬೆಂಗಳೂರಿನಲ್ಲಿ 596 ಮಂದಿಗೆ ಕೊರೊನಾ
-ಸಿಲಿಕಾನ್ ಸಿಟಿಯಲ್ಲಿ ಕೇವಲ ಏಳು ಮಂದಿ ಡಿಸ್ಚಾರ್ಜ್
ಬೆಂಗಳೂರು: ರಾಜ್ಯದಲ್ಲಿ ಅತಿ ದೊಡ್ಡ ಮಹಾ ಕೊರೊನಾ ಸ್ಫೋಟವಾಗಿದ್ದು, ಇಂದು ಒಟ್ಟು 918 ಕೋವಿಡ್-19 ಪ್ರಕರಣಗಳು ಬೆಳಕಿಗೆ ಬಂದಿವೆ. 918 ಪ್ರಕರಣಗಳ ಪೈಕಿ 596 ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಆದ್ರೆ ಇಷ್ಟು ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ರೆ, ಕೇವಲ ಏಳು ಮಂದಿ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ 596 ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಸಮುದಾಯಕ್ಕೆ ಹರಡಿರೋ ಅನುಮಾನಗಳು ದಟ್ಟವಾಗಿವೆ. ಈ ನಡುವೆ ಸರ್ಕಾರ ಇನ್ನು ಲಾಕ್‍ಡೌನ್ ಮಾಡಬೇಕಾ ಅನ್ನೋ ಚರ್ಚೆಯಲ್ಲಿ ಮುಳುಗಿದೆ. ಇಂದು ಒಟ್ಟು 11 ಮಂದಿಯನ್ನು ಕೊರೊನಾ ಬಲಿ ಪಡೆದಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 596, ದಕ್ಷಿಣ ಕನ್ನಡ 49, ಕಲಬುರಗಿ 33, ಬಳ್ಳಾರಿ 24, ಗದಗ 24, ಧಾರವಾಡ 19, ಬೀದರ್ 17, ಉಡುಪಿ 14, ಹಾಸನ 14, ಕೋಲಾರ 14, ಯಾದಗಿರಿ 13, ಶಿವಮೊಗ್ಗ 13, ತುಮಕೂರು 13, ಚಾಮರಾಜನಗರ 13, ಮಂಡ್ಯ 12, ಮೈಸೂರು 12, ಕೊಡಗು 9, ರಾಯಚೂರು 6, ದಾವಣಗೆರೆ 6, ಬೆಂಗಳೂರು ಗ್ರಾಮಾಂತರ 5, ಉತ್ತರ ಕನ್ನಡ 2, ಬಾಗಲಕೋಟೆ, 2, ಚಿಕ್ಕಮಗಳೂಉರ 2, ಚಿತ್ರದುರ್ಗ 2, ಬೆಳಗಾವಿ, ಚಿಕ್ಕಬಳ್ಳಾಪುರ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿದೆ.
ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,923ಕ್ಕೇರಿಕೆಯಾಗಿದ್ದು, 11 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 4,441 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 7,287 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸಂಜೆಯ ಪತ್ರಿಕಾ ಪ್ರಕಟಣೆ 27/06/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/V5dyP60cOk @BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/U3KrILmrav— K'taka Health Dept (@DHFWKA) June 27, 2020
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,531ಕ್ಕೇರಿಕೆಯಾಗಿದೆ. ಇವುಗಳ ಪೈಕಿ 1,913 ಸಕ್ರಿಯ ಪ್ರಕರಣಗಳಿದ್ದು, 533 ಮಂದಿಗೆ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 84 ಮಂದಿಗೆ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಇಂದು ಕೇವಲ ಏಳು ಮಂದಿ ಡಿಸ್ಚಾರ್ಜ್ ಆಗಿದ್ದಾರೆ.