ರಾಜ್ಯಸಭಾ ಚುನಾವಣೆ ಜೂನ್ 19ಕ್ಕೆ ನಿಗದಿ

Public TV
1 Min Read

ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ.

ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು.

ಈ ಸಂಬಂಧ ಮಾರ್ಚ್ 24ರಂದು ಮಾಹಿತಿ ನೀಡಿದ್ದ ಚುನಾವಣಾ ಆಯೋಗ, ರಾಜ್ಯಸಭೆ ಚುನಾವಣೆ ವೇಳೆ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಚುನಾವಣಾ ಅಧಿಕಾರಿಗಳು ಹಾಗೂ ಶಾಸಕರು ಒಂದೆಡೆ ಸೇರಬೇಕಾಗುತ್ತದೆ. ಕೊರೊನಾ ವೈರಸ್ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಎಲ್ಲರನ್ನೂ ಒಂದು ಕಡೆ ಸೇರಿಸುವುದು ಉಚಿತವಲ್ಲ. ಈ ಕಾರಣಕ್ಕೆ ಚುನಾವಣೆಯನ್ನೇ ಮುಂದೂಡಿರುವುದಾಗಿ ತಿಳಿಸಿತ್ತು.

ಒಟ್ಟು 17 ರಾಜ್ಯಗಳ 55 ರಾಜ್ಯಸಭಾ ಸೀಟುಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ ಇವುಗಳ ಪೈಕಿ 37 ಸೀಟುಗಳಿಗೆ ಅವಿರೋಧ ಆಯ್ಕೆ ನಡೆದಿರುವುದರಿಂದ ಉಳಿದ 18 ಸೀಟುಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *