ಲಾಕ್‍ಡೌನ್, ನೈಟ್ ಕರ್ಫ್ಯೂ ನಡುವೆಯೂ ಕೊರೊನಾ ಸ್ಫೋಟ – 24 ಗಂಟೆಯಲ್ಲಿ 1.45 ಲಕ್ಷ ಜನಕ್ಕೆ ಸೋಂಕು

Public TV
1 Min Read

ನವದೆಹಲಿ: ಮಹಾಮಾರಿಯ ನಿಯಂತ್ರಣಕ್ಕಾಗಿ ಬಹುತೇಕ ರಾಜ್ಯಗಳು ಲಾಕ್‍ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಕಠಿಣ ನಿಯಮಗಳನ್ನ ಜಾರಿಗೆಗೊಳಿಸಿ. ಈ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿದ್ದರೂ ದೇಶದಲ್ಲಿ ಇಂದು ಸಹ ಕೊರೊನಾ ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ 1,45,384 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿವೆ. ಒಂದೇ ದಿನ ಕೊರೊನಾದಿಂದ 794 ಜನ ಪ್ರಾಣ ಕಳೆದುಕೊಂಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ಬುಲೆಟಿನ್ ಬಿಡುಗಡೆಗೊಳಿಸಿದ್ದು, ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,32,05,926ಕ್ಕೇರಿಕೆಯಾಗಿದೆ. ನಿನ್ನೆ 77,567 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ 10,46,631 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರ ಸಂಖ್ಯೆ 1,68,436ಕ್ಕೆ ಏರಿದೆ. ಇದುವರೆಗೂ 9,80,75,160 ಜನ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಏಪ್ರಿಲ್ 9ರಂದು 11,73,219 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *