ವಿಜಯಪುರ: ಜಿಲ್ಲೆಯಲ್ಲಿ ಒಂದೆಡೆ ಮಹಾಮಾರಿ ಕೊರೊನಾ ಕಾಟವಾದರೆ, ಮತ್ತೊಂದೆಡೆ ಬ್ಲ್ಯಾಕ್ ಫಂಗಸ್ ಕಾಟ ಬೇತಾಳದಂತೆ ಕಾಡುತ್ತಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ 14 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ವರೆಗೆ ಬರೋಬ್ಬರಿ 50 ಪ್ರಕರಣಗಳು ವರದಿಯಾಗಿವೆ.
ಇಂದು 14 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 50 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾದಂತಾಗಿವೆ. ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಬ್ಲ್ಯಾಕ್ ಫಂಗಸ್ ಪ್ರಕರಣ ಮತ್ತೆಯಾದಲ್ಲಿ ಖಾಸಗಿ ಆಸ್ಪತ್ರೆಯವರು ಮುಚ್ಚಿಟ್ಟು ಚಿಕಿತ್ಸೆ ಕೊಡಬಾರದು ಎಂದು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್ ಪತ್ತೆ ಹಚ್ಚಿದ ಆಸ್ಪತ್ರೆಯವರೇ ಅವರಿಗೆ ಚಿಕಿತ್ಸೆ ಕೊಡಬೇಕು. ಬ್ಲ್ಯಾಕ್ ಫಂಗಸ್ ನ ಔಷಧಿ ಇನ್ನೂ ಮಾರುಕಟ್ಟೆಯಲ್ಲಿ ಸಿಗುತ್ತಿಲ್ಲ. ಜಿಲ್ಲೆಯಲ್ಲಿ ಪ್ರಕರಣ ಹೆಚ್ಚಾಗಿರುವ ಕಾರಣ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಡಿಸಿ ಸುನಿಲ್ ಕುಮಾರ್ ತಿಳಿಸಿದ್ದಾರೆ.