ಹಾಸನ: ವಿದ್ಯಾರ್ಥಿನಿಯನ್ನ ಚುಡಾಯಿಸಿದ್ದಕ್ಕೆ ವ್ಯಕ್ತಿಯೋರ್ವನನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಕಳಿಸಿದ ಘಟನೆ ಹಾಸನ ನಗರದ ಕರಿಗೌಡ ಬಡಾವಣೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆಕೆಯನ್ನ ಎಳೆದಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಸಿಕ್ಕಾಪಟ್ಟೆ ಗೂಸಾ ಕೊಟ್ಟಿದ್ದಾರೆ.
ವಿಷಯ ತಿಳಿದ ಬಡಾವಣೆ ಪೊಲೀಸ್ ಠಾಣೆಯ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.