ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ದರ್ಶನ್, ಶಿವಣ್ಣ – ಮದುವೆ ಪತ್ರ ವೈರಲ್

Public TV
2 Min Read

ಬೆಂಗಳೂರು : ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ಶಿವರಾಜ್ ಕುಮಾರ್, ಗೀತಾ 35 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದರೆ, ಡಿ ಬಾಸ್ ದರ್ಶನ್ ದಂಪತಿ 18 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ.

ದರ್ಶನ್ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಮೇ 19 ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿಗೆ ಮರೆಯಲಾಗದ ದಿನವಾಗಿದೆ. 2003ರಲ್ಲಿ ದರ್ಶನ್ ವಿಜಯಲಕ್ಷ್ಮಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದರ್ಶನ್ ದಂಪತಿಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳ ಸುರಿಮಳೆ ಹರಿಸುತ್ತಿದ್ದಾರೆ. ಮದುವೆ ವಾರ್ಷಿಕೋತ್ಸವದ ವಿಶೇಷ ದಿನ ದರ್ಶನ್ ಅವರ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.

 

View this post on Instagram

 

A post shared by Roberrt (@dbossfanspage)

ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿ ಇಂದು 18ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ. ದರ್ಶನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು 17 ವರ್ಷಗಳು ಪೂರೈಸಿದೆ. ದರ್ಶನ್ ಮತ್ತು ವಿಜಯಲಕ್ಷ್ಮಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದವರು. ಮೇ 19, 2003ನೇ ಇಸವಿಯಲ್ಲಿ ತೂಗುದೀಪ ಶ್ರೀನಿವಾಸ್ ಪುತ್ರ ದರ್ಶನ್, ವಿಜಯಲಕ್ಷ್ಮಿ ಜೊತೆ ಹಸೆಮಣೆ ಏರಿದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ಮದುವೆ ಪವಿತ್ರ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತ್ತು. ಇಂದು ವಿವಾಹ ವಾರ್ಷಿಕೋತ್ಸವ ಸಂಬ್ರಮದಲ್ಲಿರುವ ದರ್ಶನ್‍ಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

 

View this post on Instagram

 

A post shared by Roberrt (@dbossfanspage)

1986ರ ಮೇ 19ರಂದ ಶಿವರಾಜ್ ಕುಮಾರ್, ಗೀತಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುಂದರ ಬಂಧಕ್ಕೆ ಈಗ 35 ವರ್ಷದ ಸಂಭ್ರಮ. ಸ್ಯಾಂಡಲ್‍ವುಡ್ ನ ಈ ಸುಂದರ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಣ್ಣ ದಂಪತಿಯ ಫೋಟೋ ಶೇರ್ ಮಾಡಿ, ವಿಶ್ ಮಾಡುವ ಮೂಲಕ ಸಂಭ್ರಮಿಸುತ್ತಿದ್ದಾರೆ.

ಶಿವಣ್ಣ ಅಭಿಮಾನಿಗಳು ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸ್ಟೇಟಸ್‍ನಲ್ಲಿ ಹಾಕಿಕೊಂಡು ದಂಪತಿಗೆ ಶುಭಕೋರುತ್ತಿದ್ದಾರೆ. ಮದುವೆ ವಾರ್ಷಿಕೊತ್ಸವ ದಿನ ಇಬ್ಬರು ಸ್ಟಾರ್ ನಟರ ಮದುವೆ ಆಮಂತ್ರಣ ಪತ್ರಗಳು ವೈರಲ್ ಆಗುತ್ತಿವೆ.

 

ಪ್ರತಿವರ್ಷ ಶಿವಣ್ಣ ಮದುವೆ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಅದ್ದೂರಿ ಆಚರಣೆಗೆ ಬ್ರೇಕ್ ಬಿದ್ದಿದೆ. ಕೆ.ಜಿ ರಸ್ತೆಯಲ್ಲಿರುವ ಚಿತ್ರಮಂದಿರದ ಕಾರ್ಮಿಕರಿಗೆ ರೇಷನ್ ಕಿಟ್ ವಿತರಣೆ ಮಾಡಲಾಗುತ್ತಿದೆ. ಶಿವು ಅಡ್ಡ ಮತ್ತು ಶಿವ ಸೈನ್ಯ ಅಭಿಮಾನಿ ಬಳಗ ಒಟ್ಟಾಗಿ ಈ ಮಾನವೀಯ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಶಿವಣ್ಣ ದಂಪತಿ ಒಂದೊತ್ತಿನ ಊಟಕ್ಕೂ ಪರದಾಡುತ್ತಿರುವ ಜನರಿಗೆ ಆಸರೆ ಹೆಸರಿನ ಅಡಿಯಲ್ಲಿ ನಾಗಾವರ ಏರಿಯಾದಲ್ಲಿ ಪ್ರತಿನಿತ್ಯ 500 ಜನರಿಗೆ ಊಟದ ವ್ಯವಸ್ಥೆ ಮಾಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *