ಬೆಂಗಳೂರು: ಅಧಿಕಾರ ದುರ್ಬಳಕೆ ಮಾಡಿ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಸರ್ಕಾರದ ಪ್ರಭಾವಿ ವ್ಯಕ್ತಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಾಗಿದೆ.
ದೂರು ನೀಡಿದ ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಸಂತೃಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ ಮಾಡಲು ಯುವತಿ ಬಯಸಿದ್ದರು. ಆದರೆ ಈ ಯುವತಿಯನ್ನು ರಮೇಶ್ ಜಾರಕಿಹೊಳಿ ತನ್ನ ಕಾಮ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಸಚಿವ ರಮೇಶ್ ಜಾರಕಿಹೊಳಿಯ ರಾಸಲೀಲೆಯ ವೀಡಿಯೊ ಚಿತ್ರೀಕರಣವನ್ನು ದೆಹಲಿಯ ಕರ್ನಾಟಕ ಭವನದಲ್ಲಿ ಚಿತ್ರೀಕರಿಸಲಾಗಿದೆ. ಸಚಿವರ ಈ ನಡತೆ ಕಂಡು ದೆಹಲಿ ಭವನದಿಂದ ಕೆಲ ಸಚಿವರು ಹೊರ ಹೋಗಿದ್ದರು ಎಂಬ ವಿಚಾರ ಈಗ ಲಭ್ಯವಾಗಿದೆ.