ಸರ್ಕಾರದಲ್ಲೇ ಕೆಲಸ ಮಾಡ್ತಿರೋ ನಿರ್ದೇಶಕರ ಮಗನನ್ನ ಯಾಕೆ ಕರೆಸಿಲ್ಲ: ಇಂದ್ರಜಿತ್ ಪ್ರಶ್ನೆ

Public TV
3 Min Read

– ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ
– ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್ಲ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಇದನ್ನೂ ಓದಿ:  ಡ್ರಗ್ಸ್ ದಂಧೆಯಲ್ಲಿ ರಾಗಿಣಿ ಆ್ಯಕ್ಟಿವ್ ಮೆಂಬರ್ – ಸೆ.24ರವರೆಗೂ ರಾಗಿಣಿ, ಸಂಜನಾಗೆ ಜೈಲು ಫಿಕ್ಸ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು ಸಿಸಿಬಿ ಮುಂದೆ ಹೇಳಿದ್ದೇನೆ. ಈ ಮೂಲಕ ಇಡೀ ಕರ್ನಾಟಕಕ್ಕೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ಡ್ರಗ್ಸ್ ಸೇವನೆ ಮಾಡುವುದು ತಪ್ಪು ಎಂಬ ಸಂದೇಶ ಹೋಗಿದೆ. ಆದರೆ ನಾನು ಸಿಸಿಬಿಗೆ ಮಾಹಿತಿ ಕೊಟ್ಟ ನಂತರ ಆದ ಬೆಳವಣಿಗೆ ಅಷ್ಟು ಖುಷಿ, ಸಂತೋಷ ಕೊಟ್ಟಿಲ್ಲ. ಏನು ಆಗಬೇಕಿತ್ತೋ ಅದು ಇನ್ನೂ ಹೆಚ್ಚಾಗಿ ಆಗಬೇಕಿತ್ತು. ನಮ್ಮ ಪೊಲೀಸರು ಕೆಲಸ ಮಾಡುತ್ತಿದ್ದರೂ ಎಲ್ಲೋ ಒಂದುಕಡೆ ಕೈ ಕಟ್ಟಿ ಹಾಕಿರುವಾಗಿದೆ ಎಂದು ಅಭಿಪ್ರಾಯಪಟ್ಟರು.

ಡ್ರಗ್ಸ್ ಮಾಫಿಯಾದಲ್ಲಿ ನಟಿಯಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಈವೆಂಟ್ ಮ್ಯಾನೇಜರ್‌ಗಳು, ಹಲವಾರು ರಾಜಕಾರಣಿಗಳು ಇದ್ದಾರೆ. ಆದರೆ ಇಲ್ಲಿ ಇಬ್ಬರೂ ನಟಿಯನ್ನು ಮಾತ್ರ ಅರೆಸ್ಟ್ ಮಾಡಿ, ಇಲ್ಲಿ ಎಲ್ಲೂ ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ನಾಮಕಾವಸ್ಥೆಗೆ ಮಾಡಿದಂತೆ ಇದೆ. ಯಾವುದೇ ರಾಜಕೀಯ ವ್ಯಕ್ತಿಗಳ ಒತ್ತಡವಿಲ್ಲದೆ, ಯಾರ‍್ಯಾರು ದೊಡ್ಡ ವ್ಯಕ್ತಿಗಳಿದ್ದಾರೆ, ನಟರ ಮಕ್ಕಳು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳನ್ನು ಕರೆಸಿ ಕೂಲಂಕುಶವಾಗಿ ವಿಚಾರಣೆ ಮಾಡಬೇಕು. ಆಗ ನಿಮ್ಮ ಬಗ್ಗೆ ನಮಗೆ ಗೌರವ ಹೆಚ್ಚಾಗುತ್ತದೆ. ಆಗ ಇಡೀ ಕರ್ನಾಟಕಕ್ಕೆ ಒಂದು ಸಂದೇಶ ಕೊಟ್ಟದಂತಾಗುತ್ತದೆ ಎಂದು ಸಿಸಿಬಿ ತನಿಖೆ ಬಗ್ಗೆ ಮಾತನಾಡಿದರು.

ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು. ಇಲ್ಲಿ ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ. ಇದು ಯಾವುದೇ ಲವ್ ಜಿಹಾದ್ ಅಲ್ಲ. ಡ್ರಗ್ ವಿಚಾರವನ್ನ ಡೈವರ್ಟ್ ಮಾಡಲು ಹೋಗಬೇಡಿ. ಒಬ್ಬ ನಟಿಗೆ ಲವ್ ಜಿಹಾದ್ ಮಾಡಲಿಕೆ ಸಾಧ್ಯವೇ ಎಂದು ಪ್ರಶ್ನಿಸಿದರು.

ಒಬ್ಬ ನಟಿ ಒಂದು ಬಾರಿ ಹಂದಿ, ನಾಯಿ ಅಂತ ಹೇಳಿರುವುದು. ಆದರೆ ಅದನ್ನು ಹೇಳಿಸಿಕೊಂಡಿರುವುದು ಹತ್ತತ್ತು ಸಾರಿ ಹೇಳುವ ಮೂಲಕ ಹಾಸ್ಯಾಸ್ಪದ ಮಾಡುತ್ತಿದ್ದಾರೆ ಎಂದು ಪ್ರಶಾಂತ್ ಸಂಬರಗಿಗೆ ಇಂದ್ರಜಿತ್ ಟಾಂಗ್ ನೀಡಿದರು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ. ಕರ್ನಾಟಕದಲ್ಲಿ ಸರಿಯಿಲ್ಲ ಅನ್ನಿಸುತ್ತದೆ. ಬಿಜೆಪಿ ಸರ್ಕಾರ ಇದೆ. ಆದರೆ ಕೇಂದ್ರ ಸರ್ಕಾರಕ್ಕೆ ಸರಿಯಾದ ವಿಷಯ ರವಾನೆ ಆಗುತ್ತಿರಲಿಲ್ಲ ಎಂದರು.

ಆದಿತ್ಯ ಆಳ್ವಾನ ಇನ್ನೂ ಬಂದಿಸಿಲ್ಲ. ಎ1 ಆರೋಪಿಯನ್ನ ಬಂಧಿಸಿಲ್ಲ. 12 ದಿನಗಳ ಬಳಿಕ ಒಂದಿಬ್ಬರನ್ನ ಬಂಧಿಸಿದ್ದಾರೆ. ಆದರೆ ನಟರ ಮಕ್ಕಳು, ರಾಜಕಾರಣಿ ಮಕ್ಕಳನ್ನ ಇನ್ನೂ ಯಾಕೆ ವಿಚಾರಣೆಗೆ ಕರೆಸಿಲ್ಲ. ಸುಶಾಂತ್ ಕೇಸ್ ಕೂಡ ಸೂಸೈಡ್ ಅಂತ ಹೇಳಿದರು. ಆದರೆ ಸಿಸಿಬಿಗೆ ಕೇಸ್ ಒಪ್ಪಿಸಲಾಗಿದೆ. ಇಲ್ಲೂ ಪ್ರಭಾವಿ ನಾಯಕರು ಫೋನ್ ಮಾಡಿ ಬಿಟ್ಟು ಬಿಡಿ ಅಂತಿದ್ದಾರೆ. ಇಂದು ವಿರೋಧ ಪಕ್ಷ ಕೇಳಬೇಕಾದ ಪ್ರಶ್ನೆಯನ್ನು ಮಾಧ್ಯಮ ಕೇಳುತ್ತಿದೆ. ಪ್ರಭಾವಿ ನಾಯಕರು ಫೋನ್ ಮಾಡಿ ಬಿಟ್ಟು ಬಿಡಿ ಅಂತಿದ್ದಾರೆ ಎಂದು ಇಂದ್ರಜಿತ್ ಹೇಳಿದರು.

ಡ್ರಗ್ ಮಾಫಿಯಾ ಸಣ್ಣ ವಿಷಯ ಅಲ್ಲ. ರಾಜಕಾರಣಿ ಪುತ್ರ ಎಂದು ಆಳ್ವಾನನ್ನು ಅರೆಸ್ಟ್ ಮಾಡಿಲ್ಲ. ಸರ್ಕಾರದಲ್ಲಿ ಕೆಲಸ ಮಾಡುತ್ತಿರುವ ನಿರ್ದೇಶಕನ ಪುತ್ರ ಇದ್ದಾನೆ. ಅವನು ಪೆಡ್ಲರ್, ಅವನನ್ನ ಯಾಕೆ ಕರೆದು ವಿಚಾರಣೆ ಮಾಡುತ್ತಿಲ್ಲ. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ತ್ಯಾಪೆ ಕೆಲಸ ಮಾಡಬೇಡಿ. ವಿಚಾರಣೆಯನ್ನ ಕೇವಲ ನೆಪವಾಗಿ ಮಾಡಬೇಡಿ. ರಾಜಕೀಯ ಪಕ್ಷದ ಮಕ್ಕಳನ್ನ ಕರೆಸಬೇಕು. ಹಳೆಯ ಡ್ರಗ್ ಪ್ರಕರಣಗಳನ್ನ ಕೆದಕಿದರೆ ಇನ್ನೂ ಸಾಕಷ್ಟು ಪ್ರಕರಣ ಬಯಲಿಗೆ ಬರುತ್ತೆ. ಆದರೆ ಈಗ ಪ್ರಕರಣದ ತನಿಖೆ ಬೇರೆ ಸ್ವರೂಪವನ್ನು ಪಡೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾರಿಗೆ ರಾಜಕೀಯ ಪ್ರಭಾವ ಇಲ್ಲ ಅಂತವರನ್ನ ಕರೆದು ವಿಚಾರಣೆ ಮಾಡುತ್ತಿದ್ದಾರೆ. ಯಾರು ಸರ್ಕಾರದಿಂದ ಈ ಪ್ರಕರಣ ಮುಚ್ಚು ಹಾಕಲು ಒತ್ತಡ ಹಾಕ್ತಿರೋರು? ಆ ವಿಚಾರ ಯಾರು ಮಾತನಾಡುತ್ತಿಲ್ಲ. ಅವರಿಗೂ ಡ್ರಗ್ ಮಾಫಿಯಾಗೂ ಏನ್ ಕನೆಕ್ಷನ್ ಇದೆ? ಅನ್ನೋದರ ಬಗ್ಗೆ ತನಿಖೆ ಆಗಬೇಕು. ಡ್ರಗ್ ಮಾಫಿಯಾ ಚಿಕ್ಕ ವಿಷಯ ಅಲ್ಲ. ಚಿಕ್ಕ ಮಕ್ಕಳಿಗೆ ಚಾಕ್ಲೇಟ್ ರೀತಿ ಸಿಗುತ್ತಿದೆ. ತನಿಖೆ ಸರಿಯಾಗಿ ಆದರೆ ಪೆಟ್ಟಿಗೆಯಲ್ಲಿರುವ ಶವಗಳು ಆಚೆ ಬರುತ್ತದೆ ಎಂದು ಇಂದ್ರಜಿತ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *