ಸಿಎಂ ಬಿಎಸ್‍ವೈಗೆ ಹೈಕಮಾಂಡ್ ಬಿಗ್ ರಿಲೀಫ್ – ಸಕ್ರಿಯರಲ್ಲದ ಸಚಿವರಿಗೆ ಕೊಕ್ ಸಾಧ್ಯತೆ

Public TV
2 Min Read

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಬಿಗ್ ರಿಲೀಫ್ ನೀಡಿದ್ದು, ಸದ್ಯಕ್ಕೆ ನಾಯಕತ್ವ ಬದಲಾವಣೆ ಮಾಡದಿರಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಸಕ್ರಿಯರಲ್ಲದ ಸಚಿವರಿಗೆ ಕೊಕ್ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಬದಲಾವಣೆಯ ಮಹಾಪರ್ವ.?: ಮೂರು ತಿಂಗಳೊಳಗೆ ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಮಹಾಪರ್ವ ನಡೆಯಲಿದೆ ಎಂಬ ಮಾಹಿತಿ ಕಮಲ ಪಾಳಯದಿಂದ ಹೊರ ಬಿದ್ದಿದೆ. ಸದ್ಯ ರಾಜ್ಯ ನಾಯಕರ ವರ್ತನೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮೂರು ತಿಂಗಳ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸೇರಿದಂತೆ ಹಲವರ ಸ್ಥಾನಮಾನಗಳು ಬದಲಾಗಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಆಡಳಿತಕ್ಕೆ ಚುರುಕು ಮುಟ್ಟಿಸಲು ಸಕ್ರಿಯರಲ್ಲದ ಸಚಿವರಿಗೆ ಕೊಕ್ ನೀಡುವ ಸಾಧ್ಯತೆಗಳಿವೆ. ಸಂಪುಟದಿಂದ ಕೈಬಿಡುವ ಹಿರಿಯ ಸಚಿವರಿಗೆ ಪಕ್ಷದಲ್ಲಿ ಜವಾಬ್ದಾರಿಗಳನ್ನು ನೀಡಲು ಬಿಜೆಪಿ ಮುಂದಾಗಿದೆ ಎಂದು ತಿಳಿದು ಬಂದಿದೆ. ಹಿರಿಯರ ಬದಲಾಗಿ ಯುವ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಚರ್ಚೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಗೆ 2023 ದೂರದೃಷ್ಟಿ- ಯಡಿಯೂರಪ್ಪ ಉತ್ತರಾಧಿಕಾರಿ ಹುಡುಕಾಟ

ಕಳೆದ ವಾರದಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿ ಬಂದಿತ್ತು. ಸಚಿವ ಸಿ.ಪಿ.ಯೋಗೇಶ್ವರ್ ಸಹ ಪರೋಕ್ಷವಾಗಿ ನಾಯತಕ್ವ ಬದಲಾವಣೆಯನ್ನ ಒಪ್ಪಿಕೊಂಡಿದ್ದರು. ಇದು ಶುದ್ಧ ಬಿಜೆಪಿ ಸರ್ಕಾರ ಅಲ್ಲ. ಮೂರು ಗುಂಪಿನ ಸರ್ಕಾರ. ರಾಮನಗರದಲ್ಲೇ ನನ್ನ ಮಾತು ನಡೀತಿಲ್ಲ. ಯಡಿಯೂರಪ್ಪ ಜೆಡಿಎಸ್, ಕಾಂಗ್ರೆಸ್ ಜೊತೆ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ನಲ್ಲಿ ತೊಡಗಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಆಪಾದಿಸಿದ್ದಾರೆ. ನನ್ನ ಇಲಾಖೆಯಲ್ಲಿ ಬಿವೈ ವಿಜಯೇಂದ್ರ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಪರೋಕ್ಷವಾಗಿ ದೂರಿದ್ದರು. ಇದನ್ನೂ ಓದಿ: ನಾಯಕತ್ವ ಬದಲಾವಣೆಯನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಚಿವ ಯೋಗೇಶ್ವರ್

ಈ ಎಲ್ಲ ಬೆಳವಣಿಗೆಗಳ ನಡುವೆ ಬಿಎಸ್‍ವೈ ಪುತ್ರ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಬಸನಗೌಡ ಪಾಟೀಲ್ ಅವರು ಈ ಹಿಂದೆಯೇ ನಾಯಕತ್ವ ಬದಲಾಗುತ್ತದೆ ಎಂದು ಹೇಳುತ್ತಾ ಬಂದಿದ್ದರು. ಉತ್ತರಾಖಂಡದಲ್ಲಿ ಸಿಎಂ ಬದಲಾವಣೆಯ ಬಳಿಕ ಪಂಚರಾಜ್ಯಗಳ ಚುನಾವಣೆಯ ಬಳಿಕ ಕರ್ನಾಟಕದಲ್ಲೂ ಸಿಎಂ ಬದಲಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಬ್ಲಾಕ್‍ಮೇಲ್ ಮಾಡುವವರನ್ನು ಮಂತ್ರಿ ಮಾಡಬೇಡಿ ಎಂದಿದ್ದೆವು- ಯೋಗೆಶ್ವರ್‌ಗೆ ರಾಜೂಗೌಡ ಟಾಂಗ್

ಬಸನ ಗೌಡ ಪಾಟೀಲ್ ಅವರ ಬಂಡಾಯದ ಬಳಿಕ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಸಹ ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಆದರೆ ಬಿಜೆಪಿಯ ಉಳಿದ ನಾಯಕರು ಯೋಗೇಶ್ವರ್ ವಿರುದ್ಧ ಗರಂ ಆಗಿ ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಸಿಎಂ ಬಿಎಸ್‍ವೈ ಬದಲಾವಣೆ ವದಂತಿ – ಹೈಕಮಾಂಡ್ ಮುಂದಿರುವ 4 ಆಯ್ಕೆ ಏನು?

Share This Article
Leave a Comment

Leave a Reply

Your email address will not be published. Required fields are marked *