ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ಸೋನು ಸೂದ್

Public TV
2 Min Read

ಮುಂಬೈ: ಕೊರೊನಾ ಸಂಕಷ್ಟದಲ್ಲಿ ನಟ ಸೋನು ಸೂದ್ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಆಸ್ಪತ್ರೆಯ ಬೆಡ್ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್ ಸಿಲಿಂಡರ್ ಕೊರತೆ ಅನುಭವಿಸುತ್ತಿರುವ ಸೋಂಕಿತರಿಗಾಗಿ ಸೋನು ಸೂದ್ ಹಲವು ಬಗೆಯಲ್ಲಿ ನೆರವು ನೀಡುತ್ತಿದ್ದಾರೆ. ಈಗ ಅವರು ಆಕ್ಸಿಜನ್ ಕೊಡಿಸುವ ಸಲುವಾಗಿ ಮತ್ತೊಂದು ಸಾಹಸಕ್ಕೆ ಮುಂದಾಗಿದ್ದಾರೆ.

ದೆಹಲಿ, ಮಹಾರಾಷ್ಟ್ರ ಸೇರಿದಂತೆ ದೇಶದಲ್ಲಿ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಸ್ಥಾಪಿಸಲು ಸೋನು ಸೂದ್ ತೀರ್ಮಾನಿಸಿದ್ದಾರೆ. ಅದಕ್ಕಾಗಿ ಅವರು ಆಕ್ಸಿಜನ್ ಪ್ಲಾಂಟ್‍ಗಳನ್ನು ಫ್ರಾನ್ಸ್‍ನಿಂದ ಆಮದು ಮಾಡಿಕೊಳ್ಳುತ್ತಿದ್ದಾರೆ. ಮೊದಲ ಆಕ್ಸಿಜನ್ ಪ್ಲಾಂಟ್ ಅನ್ನು ಫ್ರಾನ್ಸ್ ನಿಂದ ಆರ್ಡರ್ ಮಾಡಲಾಗಿದ್ದು, 10ರಿಂದ 12 ದಿನಗಳ ಒಳಗೆ ಅದು ಭಾರತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕು ಎಂದು ಸೋನು ಸೂದ್ ಪಣತೊಟ್ಟು ಸಹಾಯ ಮಾಡಲು ಮುಂದಾಗಿದ್ದಾರೆ.

ದೇಶದಲ್ಲಿ ಸಾಕಷ್ಟು ಜನರು ಆಕ್ಸಿಜನ್ ಕೊರೆತೆ ಅನುಭವಿಸುತ್ತಿರುವುದು ಗೊತ್ತಾಗಿದೆ. ಈಗ ನಾವು ಆಕ್ಸಿಜನ್ ಪ್ಲಾಂಟ್ ಪಡೆಯಲಿದ್ದೇವೆ. ಅದರಿಂದ ಸಿಲಿಂಡರ್‍ಗಳನ್ನು ಸದಾ ಕಾಲ ತುಂಬಿಸಿ ಇಡಲು ಸಹಕಾರಿ ಆಗುತ್ತದೆ. ಕೊವಿಡ್‍ನಿಂದ ಬಳಲುತ್ತಿರುವವರಿಗೆ ಇದರಿಂದ ಹೆಚ್ಚು ಅನುಕೂಲ ಆಗಲಿದೆ ಎಂದು ಸೋನು ಸೂದ್ ಹೇಳಿದ್ದಾರೆ. ಮೊದಲ ಆಕ್ಸಿಜನ್ ಪ್ಲಾಂಟ್ ಅನ್ನು ಫ್ರಾನ್ಸ್ ನಿಂದ ಆರ್ಡರ್ ಮಾಡಲಾಗಿದ್ದು, 10ರಿಂದ 12 ದಿನಗಳ ಒಳಗೆ ಅದು ಭಾರತಕ್ಕೆ ಬರಲಿದೆ. ಸಮಯ ಎಂಬುದೇ ಈಗ ನಮಗೆ ದೊಡ್ಡ ಸವಾಲಾಗಿದೆ. ಆದಷ್ಟು ಬೇಗ ಆಕ್ಸಿಜನ್ ಪ್ಲಾಂಟ್ ಬರಬೇಕು. ಅದರಿಂದ ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕು ಎಂದಿದ್ದಾರೆ ಸೋನು ಸೂದ್.

ಸೋನು ಸೂದ್ ಮಾತ್ರವಲ್ಲದೆ, ಬಾಲಿವುಡ್‍ನ ಅನೇಕ ಸೆಲೆಬ್ರಿಟಿಗಳು ಜನರ ಸಹಾಯಕ್ಕೆ ನಿಂತಿದ್ದಾರೆ. ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಸ್ ನಿಧಿ ಸಂಗ್ರಹ ಮಾಡುತ್ತಿದ್ದಾರೆ. ಅನುಷ್ಕಾ ಶರ್ಮಾ-ವಿರಾಟ್ ಕೊಯ್ಲಿ ಕೂಡ 2 ಕೋಟಿ ರೂ. ದೇಣಿಗೆ ನೀಡಿದ್ದೂ ಅಲ್ಲದೇ ಕೈಲಾದಷ್ಟು ಸಹಾಯ ಮಾಡುವಂತೆ ಜನರಿಗೆ ಕರೆ ನೀಡಿದ್ದಾರೆ. ಅರ್ಜುನ್ ಗೌಡ, ಹರ್ಷಿಕಾ ಪೂಣಚ್ಚ, ಭುವನ್ ಗೌಡ, ಜಗ್ಗೇಶ್, ಉಪೇಂದ್ರ, ಶ್ರೀಮುರಳಿ ಸೇರಿದಂತೆ ಕನ್ನಡದ ಅನೇಕ ಸೆಲೆಬ್ರಿಟಿಗಳು ಈ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *