ಹಾವೇರಿ ರೈಲ್ವೆ ನಿಲ್ದಾಣಕ್ಕೆ ಮೈಲಾರ ಮಹಾದೇವಪ್ಪ ಹೆಸರು- ಕೇಂದ್ರ ಸರ್ಕಾರ ಆದೇಶ

Public TV
0 Min Read

ಹಾವೇರಿ: ನಗರದ ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹಾವೇರಿ ರೈಲ್ವೆ ನಿಲ್ದಾಣಕ್ಕೆ ನೂತನವಾಗಿ `ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. ಇದು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿತ್ತು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ಗುಂಡಿಗೆ ಬಲಿಯಾದ ಹುತಾತ್ಮ ಮಹದೇವಪ್ಪ ಮೈಲಾರ ಅವರು ಈ ನೆಲದ ಹೆಮ್ಮೆ. ಇಂತಹ ಮಹಾತ್ಮರ ಸ್ಮರಣೆಗಾಗಿ ಹಾವೇರಿ ರೈಲ್ವೆ ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡಿರುವುದು ಸಂತಸ ತಂದಿದೆ ಎಂದು ಜಿಲ್ಲೆಯ ಜನ ಹರ್ಷ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *