ಹಿಟ್ ಆ್ಯಂಡ್ ರನ್ – ಇಬ್ಬರು ಸ್ಥಳದಲ್ಲೇ ಸಾವು

Public TV
1 Min Read

ಹುಬ್ಬಳ್ಳಿ: ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದ ಸರಕಾರಿ ಕಾಲೇಜು ಬಳಿ ತಡರಾತ್ರಿ ಸಂಭವಿಸಿದೆ.

ಅಪಘಾತದಲ್ಲಿ ಸಾವಿಗೀಡಾದ ದುರ್ದೈವಿಗಳನ್ನು ಬಸವರಾಜ್ ತಳವಾರ ಹಾಗೂ ಹನಮಂತ ಚಿಕ್ಕನರ್ತಿ ಎಂದು ಗುರುತಿಸಲಾಗಿದೆ. ನವಲಗುಂದ ತಾಲೂಕಿನ ಕಾಲವಾಡ ಗ್ರಾಮದವರಾಗಿದ್ದಾರೆ. ಬೈಕಿನಲ್ಲಿ ಹೋಗುತ್ತಿದ್ದ ಸಮಯದಲ್ಲಿ ಅಪರಿಚಿತ ವಾಹನದಲ್ಲಿ ಬಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.

ರಭಸವಾಗಿ ಹೋಗುತ್ತಿದ್ದ ವಾಹನ ಸವಾರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ತಲೆಗಳು ರಸ್ತೆಗೆ ಬಡಿದು ತೀವ್ರವಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗ ಮಧ್ಯೆದಲ್ಲೆ ಮೃತಪಟ್ಟಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಿಮ್ಸಗೆ ರವಾನೆ ಮಾಡುವ ಪ್ರಯತ್ನ ಮಾಡಿದ್ದಾರೆ. ಅದರೆ ಕಿಮ್ಸ್ ಗೆ ತೆರಳುವ ಮುನ್ನವೇ ಇಬ್ಬರು ಪ್ರಾಣಬಿಟ್ಟಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *