ಹೆಣ್ಣು ಮಗುವಿನ ತಾಯಿಯಾದ ಅಕ್ಷತಾ ಪಾಂಡವಪುರ

Public TV
1 Min Read

ಬೆಂಗಳೂರು: ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ ಬಿಗ್‍ಬಾಸ್ ಸ್ಪರ್ಧಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಗೆ ಹೆಣ್ಣು ಮಗುವಿನ ಜನನವಾಗಿದೆ.

ಈ ವಿಚಾರವನ್ನು ಸ್ವತಃ ಅಕ್ಷತಾ ಅವರೇ ತಮ್ಮ ಇನ್‍ಸ್ಟಾ ಖಾತೆಯಲ್ಲಿ ಈ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದಾರೆ. ಜನವರಿ 15ರಂದು ಇನ್ ಸ್ಟಾದಲ್ಲಿ ಗರ್ಭಿಣಿಯಾಗಿದ್ದ ಫೋಟೋ ಹಂಚಿಕೊಂಡು, ಆ ಫೋಟೋದ ಮೇಲೆ ಲಕ್ಷ್ಮಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಮಗಳು.. ಥ್ಯಾಂಕ್ಯೂ ಗಾಡ್ ಹೆಣ್ಣು ಮಗು ಎಂದು ಕ್ಯಾಪ್ಷನ್ ಕೂಡ ನೀಡಿದ್ದಾರೆ. ಮೂಲಕ ಹುಟ್ಟಿದ ಮಗು ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಈ ಹಿಂದೆ ತಾವು ಗರ್ಭಿಣಿಯಾಗಿರುವ ವಿಚಾರವನ್ನು ಕೂಡ ಅಕ್ಷತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಬದುಕೆಂಬ ಪುಸ್ತಕದಲ್ಲಿ ಮುಂದಿನ ಅಧ್ಯಾಯಕ್ಕೆ ಕೆಲವೇ ದಿನಗಳು ಬಾಕಿ. ಹೊಸವರ್ಷ ಹೊಸಬೆಳಕಿನ ನಿರೀಕ್ಷೆಯಲ್ಲಿದ್ದೇವೆ. ಈ ವಿಸ್ಮಯ ಜಗತ್ತಿನಲ್ಲಿ ಮತ್ತೊಂದು ವಿಸ್ಮಯ ಅಂದ್ರೆ ಮತ್ತೆಂದೂ ಬಾರದ ಈ ಘಳಿಗೆ…ಇನ್ನೂ ಜನವರಿ 2021ಕ್ಕೆ ಮತ್ತೊಂದು ವಿಶೇಷ ಘಳಿಗೆಯ ನಿರೀಕ್ಷೆಯಲ್ಲಿರೋದಾಗಿ ಅಕ್ಷತಾ ತಮ್ಮ ಎಫ್‍ಬಿಯಲ್ಲಿ ಬರೆದುಕೊಂಡಿದ್ದರು.

ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಅಕ್ಷತಾ ಫೋಟೋಶೂಟ್ ಸಹ ಮಾಡಿಸಿಕೊಂಡಿದ್ದು, ಜನವರಿಯಲ್ಲಿ ಮಗುವಿನ ಆಗಮನವಾಗಲಿದೆ ಎಂದು ತಿಳಿಸಿದ್ದರು. ಕೆಂಪು-ಹಳದಿ ಬಾರ್ಡರಿನ ಕಪ್ಪು ಬಣ್ಣದ ಸೀರೆ ತೊಟ್ಟು, ದೊಡ್ಡ ಕತ್ತಿನ ಸರ ಮತ್ತು ಮೂಗುತಿ ತೊಟ್ಟು ಅಕ್ಷತಾ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಅಕ್ಷತಾ ಪಾಂಡವಪುರ ಕನ್ನಡ ಬಿಗ್‍ಬಾಸ್ ಆರನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು.

ಅಕ್ಷತಾ ಪತಿ ಪ್ರಸನ್ ಸಾಗರ್ ನಿರ್ದೇಶಕರಾಗಿದ್ದಾರೆ. ಪ್ರಸನ್ನ್ ಶಿವಮೊಗ್ಗ ಜಿಲ್ಲೆಯ ಸಾಗರ್ ಮೂಲದವರಾಗಿದ್ದು, ಅಕ್ಷತಾರನ್ನ ಪ್ರೀತಿಸಿ ಮದುವೆ ಆಗಿದ್ದಾರೆ. ಎಂಟು ವರ್ಷಗಳ ಹಿಂದೆ ಗುರು-ಹಿರಿಯರ ಸಮ್ಮುಖದಲ್ಲಿ ಅಕ್ಷತಾ- ಪ್ರಸನ್ನ ಮದುವೆ ನಡೆದಿತ್ತು.

Share This Article
Leave a Comment

Leave a Reply

Your email address will not be published. Required fields are marked *