ಹೊಗಳಿ ಹೊನ್ನಶೂಲಕ್ಕೆ ಏರಿಸಿದ್ರೆ ಸಾಲದು, ಕಾಮೇಗೌಡರಿಗೆ ಚಿಕಿತ್ಸೆ ಕೊಡಿಸಿ: ಹೆಚ್‍ಡಿಕೆ

Public TV
1 Min Read

ಬೆಂಗಳೂರು: ಐಸೋಲೇಷನ್ ವಾರ್ಡಿನಲ್ಲಿ ಸರಿಯಾಗಿ ಆರೈಕೆ ಇಲ್ಲದೇ ಅನ್ನಾಹಾರ ತ್ಯಜಿಸಿರುವ ಆಧುನಿಕ ಭಗೀರಥ ಕೆರೆ ಕಾಮೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ. ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ಕಾಮೇಗೌಡರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಸಚಿವ ಸುಧಾಕರ್,  ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒಡಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಕಾಮೇಗೌಡರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿದ್ದಾರೆ ಕಾಮೇಗೌಡರು- ಸಿನಿಮಾ ಆಗಲಿದೆ ಸಾಧನೆ

ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಮಳವಳ್ಳಿ ಮತ್ತು ಮಂಡ್ಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದ್ದರಿಂದ ಕಾಮೇಗೌಡರನ್ನು ಮಂಡ್ಯದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಮನೆಯಲ್ಲಿ ಶೌಚಾಲಯ ಸೇರಿದಂತೆ ಎಲ್ಲದಕ್ಕೂ ಮಕ್ಕಳನ್ನೇ ಅವಲಂಬಿಸಿದ್ದರು. ಇದನ್ನೂ ಓದಿ: ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿದ್ದು, ಇತರೆ ಕೆಲಸಗಳ ಆರೈಕೆ ಇಲ್ಲದೆ ಕಾಮೇಗೌಡರು ಸೊರಗಿದ್ದಾರೆ. ಅನ್ನ ಆಹಾರ ಸೇವಿಸಿದ್ರೆ ಶೌಚಾಲಯಕ್ಕೆ ಹೋಗಬೇಕಾಗುತ್ತೆ ಎಂಬ ಕಾರಣಕ್ಕೆ ಊಟವನ್ನು ಕಾಮೇಗೌಡರು ಸೇವಿಸುತ್ತಿಲ್ಲ. ಇತ್ತ ಕಾಮೇಗೌಡರ ಇಬ್ಬರು ಮಕ್ಕಳು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *