ಹೊಸ ಲುಕ್‍ನಲ್ಲಿ ಕಾಣಿಸಿಕೊಂಡ ಪ್ರಣೀತಾ

Public TV
3 Min Read

ಬೆಂಗಳೂರು: ಸ್ಯಾಂಡಲ್‍ವುಡ್‍ನಿಂದ ಬಾಲಿವುಡ್‍ಗೆ ಕಾಲಿಟ್ಟಿರುವ ಕನ್ನಡದ ಬೆಡಗಿ ಪ್ರಣೀತಾ ಸುಭಾಷ್ ತೆಲುಗು, ತಮಿಳಿನಲ್ಲೂ ಸಿನಿಮಾಗಳನ್ನು ಮಾಡಿದ್ದು, ಈ ಮೂಲಕ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲೇ ಕಾಲ ಕಳೆಯುತ್ತಿದ್ದ ಪ್ರಣೀತಾ, ಇದೀಗ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ಶೂಟಿಂಗ್‍ಗೆ ಸಿದ್ಧವಾಗುತ್ತಿದ್ದಾರಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

 

View this post on Instagram

 

A post shared by Pranitha Subhash ???? (@pranitha.insta) on

ಪ್ರಣೀತಾ ಕೈಯ್ಯಲ್ಲಿ ಈಗಾಗಲೇ ಹಲವು ಸಿನಿಮಾಗಳಿದ್ದು, ಆ್ಯಕ್ಟಿಂಗ್‍ನಲ್ಲಿ ಫುಲ್ ಬ್ಯುಸಿಯಾಗಿದ್ದರು. ಇದೇ ಸಂದರ್ಭದಲ್ಲಿ ಲಾಕ್‍ಡೌನ್ ಘೋಷಣೆಯಾಯಿತು. ಹೀಗಾಗಿ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಇದರ ಜೊತೆಗೆ ಸಾಮಾಜಿಕ ಕೆಲಸಗಳಲ್ಲಿ ಸಹ ತೊಡಗಿಕೊಂಡಿದ್ದು, ಲಾಕ್‍ಡೌನ್‍ನಿಂದಾಗಿ ಸಂಕಷ್ಟ ಎದುರಿಸುತ್ತಿದ್ದ ವಲಸೆ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಸಹಾಯ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದೀಗ ಲಾಕ್‍ಡೌನ್ ಸಡಿಲಗೊಳಿಸಲಾಗಿದೆ, ಮನರಂಜನೆ ಹೊರತುಪಡಿಸಿ ಉಳಿದೆಲ್ಲ ವಲಯಗಳು ಮತ್ತೆ ಕಾರ್ಯಾರಂಭಿಸಿವೆ. ಸಿನಿಮಾ ಚಿತ್ರೀಕರಣಕ್ಕೂ ಇನ್ನೇನು ಅನುಮತಿ ಸಿಗಬೇಕಿದೆ. ಹೀಗಾಗಿ ಪ್ರಣೀತಾ ಸಿದ್ಧತೆ ನಡೆಸುತ್ತಿದ್ದಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಪ್ರಣೀತಾ ಸಲೂನ್‍ಗೆ ಹೋಗಿ ಮೇಕ್‍ಒವರ್ ಮಾಡಿಸಿಕೊಂಡಿದ್ದಾರೆ. ಈ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅಲ್ಲಿ ಯಾವ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ.

ಹೇರ್ ಕಟಿಂಗ್ ಸಹ ಮಾಡಿಸಿಕೊಂಡಿರುವ ಪ್ರಣೀತಾ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಶೂಟಿಂಗ್ ಪ್ರಾರಂಭವಾದರೆ ಹಾಜರಾಗಲು ತಯಾರಿದ್ದೇನೆ ಎಂಬ ಮುನ್ಸೂಚನೆ ನೀಡಿದ್ದಾರೆ. ಬಹುತೇಕ ಎಲ್ಲ ವಲಯಗಳು ತರೆದಿದ್ದು, ಧಾರಾವಾಹಿ ಚಿತ್ರೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಆದರೆ ಸಿನಿಮಾ ಶೂಟಿಂಗ್‍ಗೆ ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಶೀಘ್ರದಲ್ಲೇ ಸಿನಿಮಾ ಚಿತ್ರೀಕರಣಕ್ಕೂ ಅವಕಾಶ ಕಲ್ಪಿಸುವ ನಿರೀಕ್ಷೆ ಇದೆ.

 

View this post on Instagram

 

Post Covid world salon experience was nothing less than embarking on a space mission!

A post shared by Pranitha Subhash ???? (@pranitha.insta) on

ಪ್ರಣೀತಾ ಸದ್ಯ ಸ್ಯಾಂಡಲ್‍ವುಡ್‍ನ ರಾಮನ ಅವತಾರ ಹಾಗೂ ಬಾಲಿವುಡ್‍ನ ಭುಜ್: ದಿ ಪ್ರೈಡ್ ಆಫ್ ಇಂಡಿಯಾ, ಹಂಗಾಮಾ 2 ಚಿತ್ರಗಳಲ್ಲಿ ಬ್ಯಸಿಯಾಗಿದ್ದಾರೆ. ಹೀಗಾಗಿ ಮತ್ತೆ ಶೂಟಿಂಗ್‍ಗೆ ತೆರಳಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರಾ ಎಂಬ ಪ್ರಶ್ನೆ ಇದೀಗ ಮೂಡಿದೆ.

Share This Article
Leave a Comment

Leave a Reply

Your email address will not be published. Required fields are marked *