ಗೋಹತ್ಯೆ ಮಾಡಿ ಹೊಟ್ಟೆಯಲ್ಲಿದ್ದ ಕರುವಿನ ಮಾಂಸ ಕೊಂಡೊಯ್ದಿದ್ದ ಪಾಪಿ ಅರೆಸ್ಟ್

Public TV
1 Min Read

ಕಾರವಾರ: ಗರ್ಭಧರಿಸಿದ್ದ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಹೊನ್ನಾವರ (Honnavara) ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ವಲ್ಕಿಯ ತೌಫಿಕ್ ಅಹ್ಮದ್ ಜಿದ್ದಾ ಎಂದು ಗುರುತಿಸಲಾಗಿದೆ. ಆರೋಪಿ ಜ.19 ರಂದು ಗರ್ಭಧರಿಸಿದ್ದ ಗೋವಿನ ವಧೆ ಮಾಡಿ, ರುಂಡ, ಕಾಲುಗಳನ್ನು ಬಿಟ್ಟು ಗೋಮಾಂಸ ಹಾಗೂ ಹೊಟ್ಟೆಯಲ್ಲಿದ್ದ ಕರುವಿನ ಮಾಂಸ ಹೊತ್ತೊಯ್ದಿದ್ದ.

ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದ ಅರಣ್ಯದಲ್ಲಿ ಗೋವನ್ನು ಹತ್ಯೆ ನಡೆದಿತ್ತು. ಬಂಧಿತ ಆರೋಪಿ, ಗೋವಿನ ವಧೆಗೆ ಸಹಕರಿಸಿ, ಬೈಕ್ ಮೂಲಕ ಮಾಂಸವನ್ನು ಕೊಂಡೊಯ್ದಿದ್ದ. ಕೃತ್ಯದಲ್ಲಿ ಭಾಗಿಯಾದ ಮೂರು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್‍ಪಿ ಎಂ.ನಾರಾಯಣ್ ಅವರು ಆರು ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Share This Article