1 ಕೋಟಿ ನಗದು, 20 ಕೆಜಿ ಚಿನ್ನ ಸೇರಿ 21 ಕೋಟಿ ದರೋಡೆಯಾಗಿದೆ – ಎಸ್ಪಿ ಲಕ್ಷ್ಮಣ ನಿಂಬರಗಿ

Public TV
1 Min Read

-ದರೋಡೆಗೆ ಬಳಿಸಿದ ವಾಹನ ನಕಲಿ ನಂಬರ್ ಪ್ಲೇಟ್ ಹೊಂದಿದೆ

ವಿಜಯಪುರ: 1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ದರೋಡೆಯಾಗಿದೆ ಎಂದು ವಿಜಯಪುರ (Vijayapura) ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬ್ಯಾಂಕ್ ದರೋಡೆಗೆ 5 ಜನರು ಬಂದಿದ್ದರು. 6 ಜನ ಬ್ಯಾಂಕ್ ಸಿಬ್ಬಂದಿ ಹಾಗೂ 4 ಜನ ಗ್ರಾಹಕರನ್ನು ದರೋಡೆಕೋರರು ಲಾಕ್ ಮಾಡಿದ್ದಾರೆ. ಕೋಣೆಯಲ್ಲಿ ಕೂಡಿ ಹಾಕಿ, ಪ್ಲಾಸ್ಟಿಕ್ ಬ್ಯಾಂಡ್‌ಗಳಿಂದ ಕೈ, ಕಾಲು ಕಟ್ಟಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಪಂಡರಾಪುರ ಕಡೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ 1 ಕೋಟಿ ರೂ. ನಗದು, ಅಂದಾಜು 20 ಕೆಜಿ ಚಿನ್ನಾಭರಣ ಸೇರಿದಂತೆ 21 ಕೋಟಿ ರೂ. ಮೌಲ್ಯದ ನಗದು ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್‌; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು

ಮಂಗಳವಾರ (ಸೆ.17) ಸಂಜೆ 6:30 ರಿಂದ 7:30ರ ನಡುವೆ ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಮೊದಲೇ ಒಳಗೆ ಬಂದು ಕುಳಿತಿದ್ದ. ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ಲಾಕರ್ ಓಪನ್ ಇತ್ತು. ಆಗ ಬಂದೂಕಿನಿಂದ ಬೆದರಿಸಿ, ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಒಟ್ಟು 398 ಪ್ಯಾಕ್ ಚಿನ್ನ ಅಂದರೆ 21 ಕೋಟಿ ರೂ. ಮೌಲ್ಯದ ಚಿನ್ನ, ನಗದು ದರೋಡೆಯಾಗಿದೆ ಎಂದಿದ್ದಾರೆ.

ಸದ್ಯ 8 ತನಿಖಾ ತಂಡಗಳ ನೇಮಕ ಮಾಡಿ, ದರೋಡೆಕೋರರ ಸೆರೆಗೆ ಜಾಲ ಬೀಸಲಾಗಿದೆ. ಈಗಾಗಲೇ ಹುಲಜಂತಿಯಲ್ಲಿ ದರೋಡೆಗೆ ಬಳಸಿದ ವಾಹನ ಪತ್ತೆಯಾಗಿದ್ದು, ಸ್ವಲ್ಪ ದುಡ್ಡು, ಬಂಗಾರದ ಪ್ಯಾಕೇಟ್ ಸಿಕ್ಕಿದೆ. ಆದರೆ ವಾಹನ ನಕಲಿ ನಾಮಫಲಕ ಹೊಂದಿದೆ. ಆದಷ್ಟು ಬೇಗ ದರೋಡೆಕೋರರನ್ನ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

Share This Article