– ಬಳ್ಳಾರಿ-ಗಂಗಾವತಿ ಸಂಪರ್ಕ ಬಂದ್
ಕೊಪ್ಪಳ/ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ (TB Dam) 1 ಲಕ್ಷ ಕ್ಯೂಸೆಕ್ ನೀರನ್ನು ರಿಲೀಸ್ ಮಾಡಲಾಗಿದೆ. ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಯಾಗಿ ಬಳ್ಳಾರಿ-ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ.
ಮಲೆನಾಡು ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಸದ್ಯ 1,07,500 ಕ್ಯೂಸೆಕ್ ನೀರಿನ ಒಳಹರಿವಿದೆ. ಡ್ಯಾಂನ ಸುರಕ್ಷತಾ ದೃಷ್ಟಿಯಿಂದ 26 ಗೇಟ್‌ಗಳ ಮೂಲಕ 1,06,548 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.ಇದನ್ನೂ ಓದಿ: `ಡಿ ಬಾಸ್’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್ ಪೇಜ್‌ನಲ್ಲಿ ಮನವಿ
ಏಕಾಏಕಿ ಅಪಾರ ಪ್ರಮಾಣದ ನೀರು ನದಿಗೆ ರಿಲೀಸ್ ಮಾಡಿರುವುದರಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಬಳ್ಳಾರಿ-ಗಂಗಾವತಿ ಸಂಪರ್ಕ ಕಡಿತವಾಗಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸರ ನಿಯೋಜನೆ ಮಾಡಲಾಗಿದೆ.
ನದಿಗೆ ಅಪಾರ ಪ್ರಮಾಣದ ನೀರು ರಿಲೀಸ್ ಮಾಡಿರುವುದರಿಂದ ನದಿ ಪಾತ್ರದ ಗ್ರಾಮಗಳ ಜನರು ನದಿ ತೀರಕ್ಕೆ ಹೋಗದಂತೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: `I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್