– ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಬಿಹಾರ ಸಿಎಂ
ಕೋಲ್ಕತ್ತಾ: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ (Bus) ಗುದ್ದಿದ್ದ ಪರಿಣಾಮ ಬಸ್ಸಿನಲ್ಲಿದ್ದ 10 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಬುರ್ದ್ವಾನ್‌ನಲ್ಲಿ ನಡೆದಿದೆ.
ಬಿಹಾರದ (Bihar) ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿನ ಯಾತ್ರಿಕರು ದಕ್ಷಿಣ 24 ಪರಗಣ ಜಿಲ್ಲೆಯ ಗಂಗಾಸಾಗರ್‌ಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರಲ್ಲಿ ಎಂಟು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್
ಅಪಘಾತದಲ್ಲಿ 6 ಮಕ್ಕಳು ಸೇರಿ 35 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಗಸ್ಟ್ 8 ರಂದು ಮೋತಿಹಾರಿಯಿಂದ ಯಾತ್ರಿಕರು ದಿಯೋಘರ್‌ಗೆ ಭೇಟಿ ನೀಡಿ, ನಂತರ ಗಂಗಾಸಾಗರ್‌ಗೆ ತೆರಳಿ ಹಿಂತಿರುಗುತ್ತಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ: ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ
ಘಟನೆ ಕುರಿತು ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.