ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

1 Min Read

ಭೋಪಾಲ್: ಬಸ್, ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ (Madhya Pradesh) ಛಿಂದ್ವಾರಾದಲ್ಲಿ (Chhindwara) ನಡೆದಿದೆ.

ಬಸ್ ಮುಖ್ಯಮಂತ್ರಿ ಭಾಗವಹಿಸಿದ್ದ ಸಾರ್ವಜನಿಕ ಸಮಾರಂಭದಿಂದ ಹಿಂತಿರುಗುತಿದ್ದ ವೇಳೆ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಪಾಂಡೆ ತಿಳಿಸಿದ್ದಾರೆ.

ಅಪಘಾತದಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಕೊತ್ವಾಲಿ ಸ್ಟೇಷನ್ ಹೌಸ್ ಅಧಿಕಾರಿ ಆಶಿಶ್ ಕುಮಾರ್ ಹೇಳಿದರು. ಸದ್ಯ ಗಾಯಾಳುಗಳನ್ನು ಅಂಬುಲೆನ್ಸ್ ಮತ್ತು ಇತರ ವಾಹನಗಳಲ್ಲಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Share This Article