ಚಿಕ್ಕೋಡಿ: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 10ರ ಬಾಲಕನ ಕಾರು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಅಥಣಿ (Athani) ತಾಲೂಕಿನ ರಡ್ಡೆರಟ್ಟಿ ಗ್ರಾಮದ ನಿವಾಸಿ ಅಗಸ್ತ್ಯ ಕನಮಡಿ (10) ಮೃತ ದುರ್ದೈವಿ ಬಾಲಕ.ಇದನ್ನೂ ಓದಿ: ಕೊರಗಜ್ಜ ಚಿತ್ರಕ್ಕಾಗಿ ಖ್ಯಾತ ರಂಗಕರ್ಮಿ ಎಂ.ಎಸ್ ಸತ್ಯು ಕೊಟ್ಟ ಟಿಪ್ಸ್
ಮೃತ ಬಾಲಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಕಾರೊಂದು ಬಾಲಕನ ಮೇಲೆ ಹರಿದು ಹೋಗಿದೆ. ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ಆಧಾರದ ಮೇಲೆ ಆರೋಪಿ ರಾಹುಲ್ ಹುಂಡೇಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್