ಅಸ್ಸಾಂ ಬಿಜೆಪಿ ಸಂಸದನ ಮನೆಯಲ್ಲಿ 10ರ ಬಾಲಕನ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
1 Min Read

ದಿಸ್ಪುರ್: ಅಸ್ಸಾಂನ (Assam) ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದ (BJP MP) ರಾಜ್‌ದೀಪ್ ರಾಯ್ (Rajdeep Roy) ಅವರ ನಿವಾಸದಲ್ಲಿ ಶನಿವಾರ 10 ವರ್ಷದ ಬಾಲಕನ (Boy) ಶವ ಪತ್ತೆಯಾಗಿದೆ. ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ (Suicide) ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ತಾಯಿ ರಾಜ್‌ದೀಪ್ ಅವರ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಧೋಲೈ ಪ್ರದೇಶದವರಾಗಿದ್ದು, ಇಬ್ಬರು ಮಕ್ಕಳೊಂದಿಗೆ ತಮ್ಮ ನಿವಾಸದಲ್ಲಿ ವಾಸಗಿದ್ದರು. ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗ ತಕ್ಷಣವೇ ರಾಜ್‌ದೀಪ್ ರಾಯ್‌ಗೆ ಈ ಬಗ್ಗೆ ತಿಳಿಸಲಾಗಿತ್ತು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.

ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಈ ಘಟನೆಯನ್ನು ಆತ್ಮಹತ್ಯೆ ಎನ್ನಲಾಗಿದೆ. ಈ ಘಟನೆ ನಡೆದ ಸಂದರ್ಭ ನಾನು ಪಕ್ಷದ ಕಚೇರಿಯಲ್ಲಿದ್ದೆ. ವಿಷಯ ತಿಳಿದು ತಕ್ಷಣ ನಿವಾಸಕ್ಕೆ ಆಗಮಿಸಿದೆ. ಆಗ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಎಂದು ರಾಜ್‌ದೀಪ್ ರಾಯ್ ಹೇಳಿದ್ದಾರೆ. ಇದನ್ನೂ ಓದಿ: ಸ್ವಪಕ್ಷೀಯರ ವಿರುದ್ಧ ರೇಣುಕಾಚಾರ್ಯ ಗರಂ- ಕಾಂಗ್ರೆಸ್ ಜೊತೆ ಸಭೆ ಮಾಡಿದ್ರಾ?

ಬಾಲಕನ ಕುಟುಂಬ ನಮ್ಮ ನಿವಾಸದ ಮೊದಲ ಮಹಡಿಯಲ್ಲಿ ವಾಸವಾಗಿತ್ತು. ಬಾಲಕ ಉತ್ತಮ ನಡತೆಯನ್ನು ಹೊಂದಿದ್ದ. ನಾನು ಆತನನ್ನು ಶಾಲೆಗೂ ಸೇರಿಸಿದ್ದೆ. ಆತನ ತಾಯಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಚಂದ್ರಯಾನ ಸಂಭ್ರಮಾಚರಣೆ ಮಾಡಿದವರ ಮೇಲೆ ಕಾಶ್ಮೀರಿ ವಿದ್ಯಾರ್ಥಿಗಳಿಂದ ಹಲ್ಲೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್