ʻಆಪರೇಷನ್‌ ಸಿಂಧೂರʼದಲ್ಲಿ 100 ಉಗ್ರರ ಹತ್ಯೆ – ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ

By
4 Min Read

ನವದೆಹಲಿ: ʻಆಪರೇಷನ್‌ ಸಿಂಧೂರʼ (Operation Sindoor) ಹೆಸರಿನಡಿ ಭಾರತೀಯ ಸೇನೆಯು ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ (PoK) ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 100 ಉಗ್ರರ ಹತ್ಯೆಯಾಗಿದೆ ಎಂದು ಕೇಂದ್ರ ಸರ್ಕಾರ ವಿಪಕ್ಷಗಳಿಗೆ ಮಾಹಿತಿ ನೀಡಿದೆ.

ಇಂದು ಸಂಸತ್‌ ಭವನದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಗ್ರರ ನೆಲೆಗಳ ಮೇಲೆ ಬಿದ್ದ ಸೂಸೈಡ್‌ ಡ್ರೋನ್‌ಗಳು ತಯಾರಾಗಿದ್ದು ಬೆಂಗಳೂರಿನಲ್ಲಿ!

ಭಾರತ ನಡೆಸಿದ ವಾಯುದಾಳಿಯಲ್ಲಿ (Air Strike) 100 ಉಗ್ರರ ಹತ್ಯೆಯಾಗಿದೆ. ನಾವು ಈ ಪರಿಸ್ಥಿತಿಯನ್ನು ಬೆಳೆಸಲು ಬಯಸುವುದಿಲ್ಲ. ಆದ್ರೆ ಪಾಕಿಸ್ತಾನ ಕಿತಾಪತಿ ಮಾಡಿದ್ರೆ ನಾವು ಸಹ ಹಿಂದೆ ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

ಏನಿದು ʻಆಪರೇಷನ್‌ ಸಿಂಧೂರʼ?
ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಪೆಹಲ್ಗಾಮ್‌ನ (Pahalgam) ಬೈಸರನ್‌ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಪಾಕ್‌ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ.

ಮೋಸ್ಟ್‌ವಾಂಟೆಡ್‌ಗಳನ್ನ ತಯಾರು ಮಾಡ್ತಿದ್ದ ನೆಲೆಗಳು ಧ್ವಂಸ:
ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಮ್ಮ ಸಹೋದರಿಯರ ಗಂಡಂದಿರನ್ನು ಕೊಂದವರು ಈಗ ತಮ್ಮ ಇಡೀ ಕುಟುಂಬ ಕಳೆದುಕೊಂಡಿದ್ದಾರೆ: ಯೋಗಿ ಆದಿತ್ಯನಾಥ್‌

ಎಲ್ಲೆಲ್ಲಿ ದಾಳಿ ನಡೆದಿದೆ?
1) ಬಹವಾಲ್ಪುರ್: ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಬಹವಾಲ್ಪುರ್ ಮೇಲೆ ದಾಳಿ ನಡೆದಿದೆ. ಇದು ಜೈಷ್‌ ಉಗ್ರ ಸಂಘಟನೆಯ ಪ್ರಧಾನ ಕಚೇರಿಯಾಗಿತ್ತು.

2) ಮುರಿಡ್ಕೆ: ಸಾಂಬಾ ಎದುರಿನ ಗಡಿಯಿಂದ 30 ಕಿ.ಮೀ ದೂರದಲ್ಲಿದ್ದು ಇದು ಲಷ್ಕರ್-ಎ-ತೈಬಾ ಸಂಘಟನೆ ಉಗ್ರರ ಶಿಬಿರ ನಡೆಸುತ್ತಿತ್ತು. ಮುಂಬೈ ದಾಳಿ ನಡೆಸಿದ ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗಿತ್ತು.

3) ಗುಲ್ಪುರ್ : ಗಡಿ ನಿಯಂತ್ರಣ ರೇಖೆ ಪೂಂಚ್-ರಾಜೌರಿಯಿಂದ 35 ಕಿ.ಮೀ ದೂರದಲ್ಲಿದೆ. ಪೂಂಚ್‌ನಲ್ಲಿ ಏಪ್ರಿಲ್ 20, 2023 ರಂದು ನಡೆದ ದಾಳಿ ಮತ್ತು ಜೂನ್ 24 ರಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಯಾತ್ರಿಕರ ಮೇಲೆ ಇಲ್ಲಿ ತರಬೇತಿ ಪಡೆದ ಉಗ್ರರು ದಾಳಿ ನಡೆಸಿದ್ದರು.

4) ಸವಾಯಿ: ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು ಗಡಿ ನಿಯಂತ್ರಣ ರೇಖೆಯಿಂದ 30 ಕಿ.ಮೀ ದೂರದಲ್ಲಿದೆ. ಕಳೆದ ವರ್ಷ ಅಕ್ಟೋಬರ್ 20, 24 ರಂದು ಸೋನ್‌ಮಾರ್ಗ್, ಅಕ್ಟೋಬರ್ 24 ರಂದು ಗುಲ್ಮಾರ್ಗ್ ಮತ್ತು ಏಪ್ರಿಲ್ 22 ರಂದು ಪಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರು ಇಲ್ಲಿ ತರಬೇತಿ ಪಡೆದಿದ್ದರು.

5) ಬಿಲಾಲ್: ಉಗ್ರ ಸಂಘಟನೆ ಜೈಷ್–ಎ–ಮೊಹಮದ್ ಲಾಂಚ್‌ ಪ್ಯಾಡ್‌ ಇದಾಗಿದ್ದು ಉಗ್ರರು ಇಲ್ಲಿ ಕೊನೆಯ ಹಂತದ ತರಬೇತಿ ಪಡೆದು ಭಾರತಕ್ಕೆ ನುಗ್ಗುತ್ತಿದ್ದರು.

6) ಕೋಟ್ಲಿ: ಗಡಿ ನಿಯಂತ್ರಣ ರೇಖೆಯಿಂದ 15 ಕಿ.ಮೀ ದೂರದಲ್ಲಿದೆ. ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು 50 ಉಗ್ರರಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿತ್ತು.

7) ಬರ್ನಾಲಾ: ಭಾರತ ಗಡಿಯಿಂದ 10 ಕಿ.ಮೀ ದೂರದಲ್ಲಿದೆ. ಇಲ್ಲೂ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಲಾಗುತ್ತಿತ್ತು.

8) ಸರ್ಜಲ್: ಸಾಂಬಾ ಕಟುವಾ ಬಳಿ ಅಂತಾರಾಷ್ಟ್ರೀಯ ಗಡಿಯಿಂದ 8 ಕಿಲೋಮೀಟರ್ ದೂರದಲ್ಲಿ ಜೈಶ್ ಎ ಮೊಹಮದ್ ಕ್ಯಾಂಪ್.

9) ಮಹಮೂನಾ: ಸಿಯಾಲ್ ಕೋಟ್ ಬಳಿಯ ಅಂತಾರಾಷ್ಟ್ರೀಯ ಗಡಿಯಿಂದ 15 ಕಿಲೋಮೀಟರ್ ದೂರದಲ್ಲಿ ಹಿಜ್ಬುಲ್ಲಾ ಟ್ರೈನಿಂಗ್ ಸೆಂಟರ್.

Share This Article