ರಾಜ್ಯದಲ್ಲಿ ಇಂದು ಮತ್ತೆ 11 ಮಂದಿಗೆ ಕೊರೊನಾ ಸೋಂಕು-226ಕ್ಕೆ ಏರಿದ ಸೋಂಕಿತರ ಸಂಖ್ಯೆ

Public TV
2 Min Read

-ವಿಜಯಪುರಕ್ಕೆ ಕಾಲಿಟ್ಟ ಮಹಾಮಾರಿ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 11 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.

ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ತಗುಲಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಗುಮ್ಮಟ ನಗರಿಯ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಕಲಬುರಗಿಯ ಸತ್ತ ವೃದ್ಧನಿಂದ ಇಬ್ಬರಿಗೆ, ಮೈಸೂರಿನ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

1. ರೋಗಿ ನಂಬರ್ 216: 32 ವರ್ಷದ ಪುರುಷನಾಗಿದ್ದು, ಮೈಸೂರು ನಿವಾಸಿ. ರೋಗಿ ನಂವರ್ 88ರ ಸಂಪರ್ಕದಲ್ಲಿದ್ದರು. ಅಲ್ಲದೇ ಫಾರ್ಮ ಕಂಪನಿಯ ಸಿಬ್ಬಂದಿಯಾಗಿದ್ದಾರೆ. ಮೈಸೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
2. ರೋಗಿ ನಂಬರ್ 217: 75 ವರ್ಷದ ವೃದ್ಧೆಯಾಗಿದ್ದು, ಬೆಂಗಳೂರು ನಿವಾಸಿ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಸೋಂಕು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
3. ರೋಗಿ ನಂಬರ್ 218: 58 ವರ್ಷದ ವ್ಯಕ್ತಿಯಾಗಿದ್ದು, ಬೆಂಗಳೂರು ನಿವಾಸಿ. ಇವರು ಮಾರ್ಚ್ 21 ರಂದು ಇಂಡೋನೇಷಿಯಾದಿಂದ ಭಾರತಕ್ಕೆ ವಾಸಪ್ ಬಂದಿದ್ದರು. ಹೀಗಾಗಿ ಸೋಂಕು ತಗುಲಿದೆ ಎನ್ನಲಾಗಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
4. ರೋಗಿ ನಂಬರ್ 219: 76 ವರ್ಷದ ವೃದ್ಧನಾಗಿದ್ದು, ಬೆಂಗಳೂರು ನಿವಾಸಿ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರಿಗೆ ಸೋಂಕು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

5. ರೋಗಿ ನಂಬರ್ 220: 24 ವರ್ಷದ ಮಹಿಳೆಯಾಗಿದ್ದು, ಕಲಬುರಗಿ ನಿವಾಸಿ. ರೋಗಿ ನಂವರ್ 177ರ ಸಂಪರ್ಕದಲ್ಲಿದ್ದರು. ಅಲ್ಲದೇ 177ರ ಸೊಸೆಯಾಗಿದ್ದಾರೆ. ಕಲಬುರಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
6. ರೋಗಿ ನಂಬರ್ 221: 60 ವರ್ಷದ ವೃದ್ಧೆಯಾಗಿದ್ದು, ವಿಜಯಪುರ ನಿವಾಸಿ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆಯಲ್ಲಿ ಸೋಂಕು ಕಂಡುಬಂದಿದೆ. ವಿಜಯಪುರದ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
7. ರೋಗಿ ನಂಬರ್ 222: 38 ವರ್ಷದ ಮಹಿಳೆಯಾಗಿದ್ದು, ಕಲಬುರಗಿ ನಿವಾಸಿ. ರೋಗಿ ನಂವರ್ 177ರ ಸಂಪರ್ಕದಲ್ಲಿದ್ದರು. ಕಲಬುರಗಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ
8. ರೋಗಿ ನಂಬರ್ 223: 19 ವರ್ಷದ ಯುವಕನಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ನಿವಾಸಿ. ಈತ ರೋಗಿ ನಂಬರ್ 150ರ ಸಂಪರ್ಕದಲ್ಲಿದ್ದನು. ಬೆಳಗಾವಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸ ನೀಡಲಾಗುತ್ತಿದೆ.

9. ರೋಗಿ ನಂಬರ್ 224: 38 ವರ್ಷದ ಪುರುಷನಾಗಿದ್ದು, ಬೆಳಗಾವಿ ಜಿಲ್ಲೆಯ ಹೀರೇಬಾಗೇವಾಡಿ ನಿವಾಸಿ. ಈತ ರೋಗಿ ನಂಬರ್ 128ರ ಸಂಪರ್ಕದಲ್ಲಿದ್ದನು. ಬೆಳಗಾವಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸ ನೀಡಲಾಗುತ್ತಿದೆ.
10. ರೋಗಿ ನಂಬರ್ 225: 55 ವರ್ಷದ ಪುರುಷನಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ನಿವಾಸಿ. ಈತ ರೋಗಿ ನಂಬರ್ 150ರ ಸಂಪರ್ಕದಲ್ಲಿದ್ದನು. ಬೆಳಗಾವಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸ ನೀಡಲಾಗುತ್ತಿದೆ.
11. ರೋಗಿ ನಂಬರ್ 226: 25 ವರ್ಷದ ಪುರುಷನಾಗಿದ್ದು, , ಬೆಳಗಾವಿ ಜಿಲ್ಲೆಯ ರಾಯಬಾಗ ನಿವಾಸಿ. ಈತ ರೋಗಿ ನಂಬರ್ 150ರ ಸಂಪರ್ಕದಲ್ಲಿದ್ದನು. ಬೆಳಗಾವಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸ ನೀಡಲಾಗುತ್ತಿದೆ.

ಬೆಂಗಳೂರಿನ ಇಬ್ಬರು ಮತ್ತು ವಿಜಯಪುರದ 60 ವರ್ಷದ ಮಹಿಳೆಗೆ ತೀವ್ರ ಉಸಿರಾಟದ ತೊಂದರೆಯಿಂದ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಳಗಾವಿಯಲ್ಲಿ ಜಮಾತ್ ನಿಂದ ಬಂದ ತಬ್ಲಿಘಿಯಿಂದ ಸೋಂಕು ತಗುಲಿದ್ದು, ಕುಂದಾನಗರಿಗೆ ಜಮಾತ್ ಕಂಟಕ ಎದುರಾಗುತ್ತಾ ಅನ್ನೋ ಆತಂಕ ಸೃಷ್ಟಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *