Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

2 Min Read

ಅಮರಾವತಿ: ಖಾಸಗಿ ಬಸ್‌ವೊಂದು (Private Bus) ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ, ಅದರಲ್ಲಿದ್ದ ಕನಿಷ್ಠ 12 ಮಂದಿ ಸಜೀವ ದಹನವಾಗಿ, 20 ಜನರು ಗಾಯಗೊಂಡಿರುವ ದುರ್ಘಟನೆ ಆಂಧ್ರಪ್ರದೇಶದ (Andhra Pradesh) ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಇಂದು) ಬೆಳಗ್ಗೆ ನಡೆದಿದೆ.

ಹರಿಕೃಷ್ಣ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ರಾಯವರಂ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಬಸ್‌ ತಕ್ಷಣವೇ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕೆನ್ನಾಲಿಗೆಗೆ 12 ಮಂದಿ ಸಜೀವ ದಹನವಾಗಿದ್ದಾರೆ. ಇದನ್ನೂ ಓದಿ: ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು (Andhra Police) ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಘಟನೆ ಬಗ್ಗೆ ಮಾಹಿತಿ ಪಡೆದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆಯೂ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಅಪಘಾತದ ಕಾರಣ ಕುರಿತು ಸಮಗ್ರ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ | ಐಸಿಸ್, ಅಲ್-ಖೈದಾ ಜೊತೆ ಲಿಂಕ್‌ – 12 ಮಂದಿ ಶಂಕಿತರು ಅರೆಸ್ಟ್

ಪೊಲೀಸರ ಪ್ರಕಾರ, ಬಸ್ ತೆಲಂಗಾಣದ ನಿರ್ಮಲ್ ನಿಂದ ಆಂಧ್ರಪ್ರದೇಶದ ನೆಲ್ಲೂರಿಗೆ ಪ್ರಯಾಣಿಸುತ್ತಿತ್ತು. ಬಸ್‌ ಟಿಪ್ಪರ್‌ಗೆ ಡಿಕ್ಕಿ ಹೊಡೆದ ತೀವ್ರತೆ ಎಷ್ಟಿತ್ತೆಂದರೆ ಯಾರೊಬ್ಬರೂ ತಪ್ಪಿಸಿಕೊಳ್ಳಲು ಅವಕಾಶವೇ ಇರಲಿಲ್ಲ. ಹೀಗಾಗಿ ಇಡೀ ಬಸ್ ಕ್ಷಣಾರ್ಧದಲ್ಲಿ ಬೂದಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ತಿಳಿಸಿದ್ದಾರೆ. ಬಸ್‌ ಹೊತ್ತಿ ಉರಿಯುತ್ತಿರುವ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲೂ ಹರಿದಾಡುತ್ತಿವೆ.

Share This Article