Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

Public TV
1 Min Read

ರಾಯ್ಪುರ: ಭದ್ರತಾ ಪಡೆಗಳು (Security Force) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ (Bijapur) ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಬಿಜಾಪುರದ ಕಾಡಿನಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಮೂರು ಜಿಲ್ಲೆಗಳಿಂದ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್‌ಗೆ (ಡಿಆರ್‌ಜಿ) ಸೇರಿದ ಸಿಬ್ಬಂದಿ, ಕೋಬ್ರಾದ ಐದು ಬೆಟಾಲಿಯನ್‌ಗಳು ಮತ್ತು ಸಿಆರ್‌ಪಿಎಫ್‌ನ 229ನೇ ಬೆಟಾಲಿಯನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಪೊಲಿಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

ಜನವರಿ ತಿಂಗಳಿನಲ್ಲಿ ಇಲ್ಲಿಯವರೆಗೆ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 26 ಮಾವೋವಾದಿಗಳು ಮೃತಪಟ್ಟಿದ್ದಾರೆ. ಜ.12ರಂದು ಬಿಜಾಪುರ ಜಿಲ್ಲೆಯ ಮದ್ದೇಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಮಾವೋವಾದಿಗಳು ಸಾವನ್ನಪ್ಪಿದ್ದರು. ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

 

Share This Article