Uttara Kannada | ಮೊಬೈಲ್ ನೋಡಬೇಡ ಎಂದಿದ್ದಕ್ಕೆ 13ರ ಬಾಲಕ ಆತ್ಮಹತ್ಯೆ

Public TV
1 Min Read

ಕಾರವಾರ: ಮೊಬೈಲ್ (Mobile) ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.

ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಓಂ ಕದಂ (13) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಪ್ರತಿದಿನ ಹೆಚ್ಚು ಮೊಬೈಲ್ ನೋಡುತ್ತಾ ಕಾಲಕಳೆಯುತ್ತಿದ್ದ ಮಗನಿಗೆ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ದಿವಾದ ಹೇಳುತಿದ್ದರು. ಮಾತು ಕೇಳದೇ ಓಂ ಕದಂ ಹಠಕ್ಕೆ ಬಿದ್ದು ಮೊಬೈಲ್ ನೋಡುತಿದ್ದ. ಮಂಗಳವಾರ ರಾತ್ರಿ ಮೊಬೈಲ್ ನೋಡುತ್ತಾ ಕಾಲ ಕಳೆಯುತಿದ್ದ ಮಗನಿಗೆ ಗದರಿಸಿ ಮೊಬೈಲ್ ಕಸಿದುಕೊಂಡು ಓದಿಕೊಳ್ಳುವಂತೆ ತಂದೆ ಮನೋಹರ್ ಬುದ್ದಿವಾದ ಹೇಳಿದ್ದರು. ಇದನ್ನೂ ಓದಿ: ಬೀದರ್ | ಶಾದಿಮಹಲ್ ನಿರ್ಮಾಣ ಹೆಸರಲ್ಲಿ ಹಗರಣ ಆರೋಪ – ಕೋಟ್ಯಂತರ ಹಣ ನುಂಗಿದ್ರಾ ಅಧಿಕಾರಿಗಳು?

ಇದರಿಂದ ಮನನೊಂದು ಓಂ ಕದಂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ ಆತ ಬದುಕುಳಿಯಲಿಲ್ಲ. ಘಟನೆ ಸಂಬಂಧ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ಸಿಸಿಟಿವಿ ಕಣ್ಗಾವಲು

Share This Article