ಬೆಂಗಳೂರು | Forgive Me ಅಂತ ಡೆತ್‌ ನೋಟ್‌ ಬರೆದಿಟ್ಟು 13ರ ಬಾಲಕ ಆತ್ಮಹತ್ಯೆ

Public TV
1 Min Read

ಬೆಂಗಳೂರು: ನನ್ನನ್ನು ಕ್ಷಮಿಸಿ ಅಂತ ಡೆತ್‌ ನೋಟ್‌ (Death Note) ಬರೆದಿಟ್ಟು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಗಂಧಾರ್ (13) ಆತ್ಮಹತ್ಯೆಗೆ ಶರಣಾದ ಬಾಲಕ. ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ (CK Achukattu Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೆಂಗೇರಿಯಲ್ಲಿ ಕಾಮುಕನ ವಿಕೃತಿ – ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

ಬಾಲಕ ರಾತ್ರಿ ಊಟ ಮಾಡಿ ಸಹಜವಾಗಿಯೇ ರೂಮ್‌ನಲ್ಲಿ ಮಲಗಿದ್ದಾನೆ. ಬೆಳಗ್ಗೆ ತಂದೆ ರೂಮ್‌ ಬಾಗಿಲು ತೆರೆದಾಗ ಆತ್ಮಹತ್ಯೆ ಶರಣಾಗಿರೋದು ಕಂಡುಬಂದಿದೆ. Forgive Me (ನನ್ನನ್ನು ಕ್ಷಮಿಸಿ) ಅಂತ ಡೆತ್ ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಕೈದಿ ನಂ. 15528 – ಪ್ರಜ್ವಲ್‍ಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

ಬಾಲಕನ ತಂದೆ ಗಣೇಶ್ ಪ್ರಸಾದ್ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್‌ ಬಹುತೇಕ ಮುಳುಗಡೆ

Share This Article