ಸೂಸೈಡ್ ಪ್ರ್ಯಾಂಕ್ ಮಾಡಲು ಹೋಗಿ ಸಾವನ್ನಪ್ಪಿದ 13ರ ಬಾಲಕ

Public TV
1 Min Read

ಲಕ್ನೋ: ಸೂಸೈಡ್ ಪ್ರ್ಯಾಂಕ್ (Suicide Prank) ಮಾಡಲು ಹೋಗಿ ಬಾಲಕನೊಬ್ಬ (Boy) ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ (Uttar Pradesh) ಜಲೌನ್‌ನಲ್ಲಿ (Jalaun) ನಡೆದಿದೆ.

ಒರೈ ಪ್ರದೇಶದ ಕಾನ್ಶಿರಾಮ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಜಯೇಶ್ (13) ಸಹೋದರಿಯರೊಂದಿಗೆ ಆತ್ಮಹತ್ಯೆಯ ಆಟವಾಡುತ್ತಿದ್ದ ಸಂದರ್ಭ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿದು ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸಬ್ ಇನ್ಸ್‌ಪೆಕ್ಟರ್‌ನಿಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ- ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಕಿರಿಯ ಸಹೋದರಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಜಯೇಶ್ ಆತ್ಮಹತ್ಯೆ ಮಾಡಿಕೊಳ್ಳುವ ಆಟವಾಡುತ್ತಿದ್ದ ಸಂದರ್ಭ, ಆಕಸ್ಮಿಕವಾಗಿ ಕುಣಿಕೆ ಬಿಗಿಯಾಗಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಹೊರಠಾಣೆ ಉಸ್ತುವಾರಿ ಮೊಹಮ್ಮದ್ ಆರಿಫ್ ತಿಳಿಸಿದ್ದಾರೆ. ಇದನ್ನೂ ಓದಿ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಆಟವಾಡುವ ಸಂದರ್ಭ ಜಯೇಶ್‌ನ ಕಣ್ಣಿಗೆ ಬಟ್ಟೆ ಕಟ್ಟಿದ್ದು, ಬಳಿಕ ಕುತ್ತಿಗೆಗೆ ಹಗ್ಗವನ್ನು ಹಾಕಿಕೊಂಡಿದ್ದಾನೆ. ನಂತರ ಈ ಹಗ್ಗವನ್ನು ಒಂದು ಕಿಟಕಿಗೆ ಕಟ್ಟಿದ್ದಾನೆ. ಸಣ್ಣ ಟೇಬಲ್ ಮೇಲೆ ಕುಳಿತಿದ್ದ ಬಾಲಕ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಟೇಬಲ್ ತಳ್ಳಿದ್ದರಿಂದ ಕೆಳಗೆ ಬಿದ್ದಿದ್ದಾನೆ. ಇದರ ಪರಿಣಾಮ ಜಯೇಶ್‌ನ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ತುಂಗಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರ ಪ್ರಕಾರ ಮಕ್ಕಳ ತಾಯಿ ಸಂಗೀತಾ ಅವರು ತಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದು, ಕಣ್ಣು ಕಾಣಿಸುತ್ತಿದ್ದರೆ ಮಗ ಸಾಯುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್