ರಾಜ್ಯದಲ್ಲಿ 1,465, ಬೆಂಗ್ಳೂರಲ್ಲಿ 987 ಮಂದಿಗೆ ಕೊರೊನಾ

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಏರಿಳಿತ ನಡೆಯುತ್ತಲೇ ಇದೆ. ನಿನ್ನೆ 1,268 ಪ್ರಕರಣ ದಾಖಲಾಗಿದ್ದು, ಇಂದು 1,465 ಪ್ರಕರಣ ದಾಖಲಾಗುವ ಮೂಲಕ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,709 ಕ್ಕೆ ತಲುಪಿದೆ. ಬೆಂಗಳೂರು ನಗರದಲ್ಲಿ ಇಂದು 987 ಪ್ರಕರಣ ದಾಖಲಾಗಿದ್ದು, ಅದರ ಬಳಿಕ ಮೈಸೂರಿನಲ್ಲಿ ಅತಿ ಹೆಚ್ಚು ಎಂದರೆ 99 ಪ್ರಕರಣ ವರದಿಯಾಗಿದೆ. ಈವರೆಗೆ ಒಟ್ಟು 40,176 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,295 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ.5.96 ಕ್ಕೆ ತಲುಪಿದೆ.

ಈವರೆಗೆ ರಾಜ್ಯದಲ್ಲಿ 40,43,564 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,92,637 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 34,488 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 24,564 ಸ್ಯಾಂಪಲ್ (ಆರ್‌ಟಿ ಪಿಸಿಆರ್ 16,164 + 8,400 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಶಿಕ್ಷಕರ ಪರೀಕ್ಷೆಯಲ್ಲಿ ಅಕ್ರಮ ಆಗಿಲ್ಲ: ಬಿ.ಸಿ ನಾಗೇಶ್

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 10, ಬಳ್ಳಾರಿ 26, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 18, ಬೆಂಗಳೂರು ನಗರ 987, ಬೀದರ್ 1, ಚಾಮರಾಜನಗರ 13, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 25, ಚಿತ್ರದುರ್ಗ 5, ದಕ್ಷಿಣ ಕನ್ನಡ 12, ದಾವಣಗೆರೆ 12, ಧಾರವಾಡ 12, ಗದಗ 0, ಹಾಸನ 73, ಹಾವೇರಿ 2, ಕಲಬುರಗಿ 7, ಕೊಡಗು 29, ಕೋಲಾರ 1, ಕೊಪ್ಪಳ 4, ಮಂಡ್ಯ 8, ಮೈಸೂರು 99, ರಾಯಚೂರು 10, ರಾಮನಗರ 27, ಶಿವಮೊಗ್ಗ 42, ತುಮಕೂರು 15, ಉಡುಪಿ 7, ಉತ್ತರ ಕನ್ನಡ 5, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೂರೇ ದಿನಕ್ಕೆ ಶಿವಾನಂದ ಸ್ಟೀಲ್ ಬ್ರಿಡ್ಜ್ ಮತ್ತೆ ಕ್ಲೋಸ್- ಬಿಬಿಎಂಪಿ ವಿರುದ್ಧ ಜನ ಗರಂ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *