ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಕುರ್ಜು ಕೆಳಗೆ ಸಿಲುಕಿ ಓರ್ವ ಸಾವು

Public TV
1 Min Read

– 150 ಅಡಿಗೂ ಹೆಚ್ಚು ಎತ್ತರವಿದ್ದ ತೇರು

ಬೆಂಗಳೂರು ಗ್ರಾಮಾಂತರ: ಮದ್ದೂರಮ್ಮ ಜಾತ್ರೆಯಲ್ಲಿ ಕುರ್ಜುಗಳು (ತೇರು) ಧರೆಗುರುಳಿದ ಘಟನೆ ಆನೇಕಲ್‌ ತಾಲೂಕಿನಲ್ಲಿ ನಡೆದಿದೆ. ಕುರ್ಜು ಕೆಳಗೆ ಸಿಲುಕಿ ಓರ್ವ ದಾರುಣ ಸಾವನ್ನಪ್ಪಿದ್ದಾರೆ.

ಆನೇಕಲ್ ತಾಲ್ಲೂಕಿನ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ಈ ದುರ್ಘಟನೆ ನಡೆದಿದೆ. ಜಾತ್ರೆಗೆ ಗ್ರಾಮಗಳಿಂದ 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಮದ್ದೂರಮ್ಮ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಎಳೆದು ತರುವ ಹೆಸರಾಂತ ಜಾತ್ರೆ‌ ಇದು. ಪ್ರತಿಷ್ಟೆಗೆ ಅತೀ ಎತ್ತರ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಿದ್ದರು. ಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ.

ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ಕಳೆದ ವರ್ಷ ಹೀಲಲಿಗೆ ತೇರು ಬಿದ್ದಿತ್ತು. ಇಂದು ಗಾಳಿ‌ ಮಳೆ ಹೆಚ್ಚಾಗಿ‌ ಸುರಿದ ಹಿನ್ನೆಲೆ ಅವಘಡ ಸಂಭವಿಸಿದೆ. ಜಾತ್ರೆಮಯ ಸಂಭ್ರಮದ ದಿನ ಸೂತಕದ ಛಾಯೆ ಆವರಿಸಿದೆ.

Share This Article