ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 157 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 146 ಕೇಸ್ ದಾಖಲಾಗಿದ್ದು, ಇತರ 7 ಜಿಲ್ಲೆಗಳಲ್ಲಿ 11 ಕೇಸ್ ಪತ್ತೆಯಾಗಿದೆ.
ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.87 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,884ಕ್ಕೆ ತಲುಪಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,063 ಮರಣ ಪ್ರಕರಣ ಪತ್ತೆಯಾಗಿದ್ದು, ಇಂದು 216 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ ರಾಜ್ಯದಲ್ಲಿ ಒಟ್ಟು 39,49,290 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,07,301 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 34,248 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 18,001 ಸ್ಯಾಂಪಲ್ (ಆರ್‌ಟಿಪಿಸಿಆರ್ 13,364 + 4,637 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 146, ದಕ್ಷಿಣ ಕನ್ನಡ 4, ಬೆಂಗಳೂರು ಗ್ರಾಮಾಂತರ 2, ಧಾರವಾಡ, ಹಾಸನ, ಕೋಲಾರ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ತಲಾ ಒಂದೊಂದು ಸೇರಿ ಒಟ್ಟು 157 ಪ್ರಕರಣ ವರದಿಯಾಗಿದೆ.