13ರ ಬಾಲಕಿ ಮೇಲೆ 16 ಮಂದಿಯಿಂದ ಸಾಮೂಹಿಕ ಅತ್ಯಾಚಾರ – ನೋವಿನ ಕಥೆ ಬಿಚ್ಚಿಟ್ಟ ತಂದೆ!

Public TV
1 Min Read

ರಾಜಸ್ಥಾನ: 13 ವರ್ಷ ಬಾಲಕಿ ಮೇಲೆ 16 ಜನರು ಸಾಮೂಹಿಕ ಅತ್ಯಾಚಾರ ಮಾಡಿರುವುದು ನಾಚಿಕೆಗೇಡಿನ ಘಟನೆ ಭರತ್‍ಪುರದ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ತಂದೆ, ಪೊಲೀಸ್ ಠಾಣೆಯಲ್ಲಿ ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು 16 ಜನರ ವಿರುದ್ಧ ದೂರು ನೀಡಿದ್ದು, ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವು ಭರತ್‍ಪುರದ ಖೋಹ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ:  ಸಂಸ್ಕೃತದಲ್ಲಿ ಸಾಹಿತ್ಯ ಸಂತೆ ಎಂದರೆ ಸಾಹಿತ್ಯವನ್ನು ಹಂಚುವುದು: ಹಿರಿಯ ಸಾಹಿತಿ ಪಾಟೀಲ್

ನಡೆದಿದ್ದೇನು?
ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ಸಂತ್ರಸ್ತ ಅಪ್ರಾಪ್ತ ಬಾಲಕಿ ಫೆ.11ರಂದು ಮಧ್ಯಾಹ್ನ ಮೇಕೆ ಮೇಯಿಸಲು ಮತ್ತು ಕಟ್ಟಿಗೆ ತೆಗೆದುಕೊಳ್ಳಲು ಕಾಡಿಗೆ ಹೋಗಿದ್ದಳು. ಆ ವೇಳೆ ಗ್ರಾಮದ ಐವರು ಬಂದು ಸಂತ್ರಸ್ತೆಯನ್ನು ಅಪಹರಿಸಿದ್ದಾರೆ. ಬಳಿಕ ಬಾಲಕಿ ಮೇಲೆ 16 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಫೆಬ್ರವರಿ 12 ರಂದು ಸಂತ್ರಸ್ತೆ ಅವನ ಹಿಡಿತದಿಂದ ಬಿಡುಗಡೆಗೊಂಡಿದ್ದು, ತನ್ನ ಮನೆಗೆ ಬಂದಿದ್ದಾಳೆ. ನಂತರ ಅವಳು ತನ್ನ ತಂದೆಗೆ ಸಂಪೂರ್ಣ ಕಥೆಯನ್ನು ಹೇಳಿಕೊಂಡಿದ್ದಾಳೆ.

POLICE JEEP

ಘಟನೆಯ ನಂತರ ಇಡೀ ಪ್ರದೇಶದ ಜನರು ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನ 13 ವರ್ಷದ ಮಗಳನ್ನು ಕೆಲವರು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ ಎಂದು ಏರಿಯಾ ಸಿಒ ಆಶಿಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ದಾಳಿ ಮಾಡಿದ ಆರೋಪಿ..!

11 rape incidents reported in Pakistan every day, official statistics reveal

ಸಂತ್ರಸ್ತೆ 16 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ, ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೀವ್ರ ತನಿಖೆಯನ್ನು ಮಾಡುತ್ತಿದ್ದಾರೆ. ಪ್ರಸ್ತುತ ಐವರು ಆರೋಪಿಗಳೇ ಸ್ವಯಃ ಪ್ರೇರಣೆಯಿಂದ ಪೊಲೀಸ್ ಠಾಣೆಗೆ ಶರಣಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *