ಮುಂಬೈ ಆಸ್ಪತ್ರೆಯಲ್ಲಿ ಒಂದೇ ದಿನ 18 ರೋಗಿಗಳ ಸಾವು – ತನಿಖೆಗೆ ಆದೇಶಿಸಿದ ಸಿಎಂ ಶಿಂಧೆ

Public TV
1 Min Read

ಮುಂಬೈ: ಥಾಣೆಯ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ (Hospital) ಒಂದೇ ದಿನ 18 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ಒಂದೇ ದಿನ ಸಾವಿನ ಸಂಖ್ಯೆ ಇಷ್ಟು ಏರಿಕೆಯಾಗಿರುವುದಕ್ಕೆ ಕಳವಳ ವ್ಯಕ್ತವಾಗಿದೆ.

ಮೃತರಲ್ಲಿ 10 ಮಹಿಳೆಯರು ಮತ್ತು ಎಂಟು ಪುರುಷರು ಸೇರಿದ್ದಾರೆ. ಸತ್ತವರಲ್ಲಿ 12 ಜನ 50 ವರ್ಷ ಮೇಲ್ಪಟ್ಟವರಾಗಿದ್ದಾರೆ. ಘಟನೆಯ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಆರೋಗ್ಯ ಸೇವೆಗಳ ಆಯುಕ್ತರ ನೇತೃತ್ವದಲ್ಲಿ ಸ್ವತಂತ್ರ ತನಿಖಾ ಸಮಿತಿಯನ್ನು ಸ್ಥಾಪಿಸಲು ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ಜಿಲ್ಲಾಧಿಕಾರಿ, ನಾಗರಿಕ ಮುಖ್ಯಸ್ಥರು, ಆರೋಗ್ಯ ನಿರ್ದೇಶಕರು ಸೇರಿದಂತೆ ಮುಂಬೈನ ಸರ್ಕಾರಿ-ಜೆಜೆ ಆಸ್ಪತ್ರೆಯ ತಜ್ಞರು ಇರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನೆ ಅಧ್ಯಕ್ಷನ ಮೇಲೆ ಗುಂಡು ಹಾರಿಸಿದ ಸಂಘಟನೆಯ ಮಾಜಿ ಸದಸ್ಯ

ವೈದ್ಯರ ನಿರ್ಲಕ್ಷದಿಂದ ಸಾವುಗಳು ಸಂಭವಿಸಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರಿಂದಾಗಿ ಚಿಕಿತ್ಸೆಗೆ ಬಳಸಿದ ಔಷಧಿ ಹಾಗೂ ಸಿಬ್ಬಂದಿಗಳ ಮಾಹಿತಿ ಕಲೆಹಾಕಲಾಗಿದೆ. ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯ ಲೋಪವಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನಷ್ಟೇ ಸಾವಿಗೆ ಕಾರಣ ತಿಳಿದು ಬರಬೇಕಿದೆ. ಅಲ್ಲದೇ ಈ ಘಟನೆಯ ಬಗ್ಗೆ ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಆರೋಗ್ಯ ಸಚಿವ ತಾನಾಜಿ ಸಾವಂತ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಆದೇಶಿಸಿದ್ದಾರೆ.

500 ರೋಗಿಗಳ ಸಾಮಥ್ರ್ಯದ ಆಸ್ಪತ್ರೆಯಲ್ಲಿ 650 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಕೆಲವು ವೈದ್ಯರು ಡೆಂಗ್ಯೂನಿಂದ ಬಳಲುತ್ತಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆಗೆ’ ಚಾಲನೆ ನೀಡಿದ ಅಮಿತ್ ಶಾ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್