ಶಬರಿಮಲೆ ಬೆಟ್ಟ ಇಳಿಯುವಾಗ ಹೃದಯಾಘಾತ – 18 ವರ್ಷದ ಅಯ್ಯಪ್ಪ ಭಕ್ತ ಸಾವು

Public TV
1 Min Read

ರಾಮನಗರ: ಶಬರಿಮಲೆ (Sabarimala) ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ (Kanakapur) ಮೂಲದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮೂಲತಃ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್, ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ. ಇದನ್ನೂ ಓದಿ: ಭೀಮಾತೀರದ ನಕಲಿ ಎನ್‌ಕೌಂಟರ್ ಕೇಸ್ – ಜು.1ಕ್ಕೆ ವಿಚಾರಣೆ ಮುಂದೂಡಿಕೆ

ಅಯ್ಯಪ್ಪನ ದರ್ಶನ ಮುಗಿಸಿ, ಬೆಟ್ಟ ಇಳಿಯುವಾಗ ಪ್ರಜ್ವಲ್‌ಗೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಶಬರಿಮಲೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ ಕನಕಪುರಕ್ಕೆ ತರಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಶಾರ್ಟ್‌ಕಟ್‌ನಲ್ಲಿ ಬಂದಿದ್ದಕ್ಕೆ ಇಂಗ್ಲಿಷ್‌ನಲ್ಲಿ ಕೆಟ್ಟದಾಗಿ ಬೈಯ್ದು, ಹಲ್ಲೆ ಮಾಡಿದ್ರು – ರ‍್ಯಾಪಿಡೊ ಚಾಲಕ ಸುಹಾಸ್‌

Share This Article