ಬಾಂಗ್ಲಾದೇಶ | ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ

Public TV
1 Min Read

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಮಧ್ಯಂತರ ಸರ್ಕಾರ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚುತ್ತಲೇ ಇವೆ. ಹಿಂದೂ ದೇಗುಲಗಳ (Temple) ಮೇಲಿನ ದಾಳಿ ಬಳಿಕ ಇದೀಗ ಚಿತ್ತಗಾಂಗ್ ಪ್ರದೇಶದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ (Christian Community) 19 ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಬಂದರ್ಬನ್ ಜಿಲ್ಲೆಯ ನೋಟುನ್ ತೊಂಗ್‌ಹಿರಿ ತ್ರಿಪುರಾ ಪರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 17 ಮನೆಗಳು ಸಂಪೂರ್ಣ ಭಸ್ಮವಾಗಿದ್ದು, ಎರಡು ಮನೆಗಳು ಭಾಗಶಃ ಸುಟ್ಟಿವೆ. ಈ ಬಗ್ಗೆ ಬಾಂಗ್ಲಾ ಸರ್ಕಾರ ಒಂದೇ ಸಮುದಾಯದ ಎರಡು ಗುಂಪುಗಳ ನಡುವಿನ ವೈಷಮ್ಯವೇ ಇದಕ್ಕೆ ಕಾರಣ ಎಂದು ಹೇಳಿಕೊಂಡಿದೆ.

ಕ್ರಿಸ್ಮಸ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆಂದು ಚರ್ಚ್‌ಗೆ ಹೋಗಿದ್ದಾಗ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ ಎಂದು ಜನರು ಆರೋಪಿಸಿದ್ದಾರೆ. ಸಮುದಾಯದ ಮುಖಂಡರ ದೂರು ಆಧರಿಸಿ ಎಫ್‌ಐಆ‌ರ್ ದಾಖಲಿಸಲಾಗಿದೆ. ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article