ಮುಂಬೈ: ನಿನ್ನೆ ಮುಂಜಾನೆ ಯುವತಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಗೋವಂಡಿ ಪ್ರದೇಶದಲ್ಲಿ ಕೇಟರಿಂಗ್ ಕೆಲಸ ಮಾಡುತ್ತಿರುವ 19 ವರ್ಷದ ಯುವತಿ ಶನಿವಾರ ಮುಂಜಾನೆ 4.30ರ ಸುಮಾರಿಗೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಮೂರು ಮಂದಿ ಹದಿಹರೆಯದವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಕೃತ್ಯವೆಸಗಿದ ಮೊತ್ತಬ್ಬನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ
ನಡೆದಿದ್ದೇನು?: ಕೇಟರಿಂಗ್ ಕೆಲಸ ಮಾಡುತ್ತಿರುವ ಯುವತಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಳು. ಆಗ ಆಕೆಯನ್ನು ತಡೆದು ಆರೋಪಿ ನಿನ್ನೊಂದಿಗೆ ಮಾತನಾಡಬೇಕು ಎಂದಿದ್ದ. ನಂತರ ಆರೋಪಿ ಯುವತಿಯನ್ನು ಕೊಳೆಗೇರಿ ಕೊಠಡಿಯ ಮೇಲಂತಸ್ತಿಗೆ ಕರೆದೊಯ್ದು, ಅಲ್ಲಿ ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಕೂಡಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸಂತ್ರಸ್ತೆ ಪೊಲೀಸರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಮಕ್ಕಳ ಸಮ್ಮುಖದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವೃದ್ಧ ಜೋಡಿ
ಸ್ಥಳೀಯ ಗುಪ್ತಚರ ನೀಡಿದ ವಿವರಣೆಯನ್ನು ಆಧರಿಸಿ, ನಾಲ್ವರು ಆರೋಪಿಗಳ ಗುರುತನ್ನು ಪತ್ತೆಹಚ್ಚಿದ್ದೇವೆ. ಶನಿವಾರ ಮಧ್ಯಾಹ್ನ ರೈಲಿನಲ್ಲಿ ಉತ್ತರ ಪ್ರದೇಶದ ಬಸ್ತಿಗೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಅಪ್ರಾಪ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ