ಶಿವಮೊಗ್ಗ ಜೈಲಿಗೆ ಬಿಸ್ಕೆಟ್​ ಪ್ಯಾಕ್​ನಲ್ಲಿ ಗಾಂಜಾ ಸಾಗಾಟ – ಇಬ್ಬರು ಅರೆಸ್ಟ್‌

Public TV
1 Min Read

ಶಿವಮೊಗ್ಗ: ಇಲ್ಲಿನ (Shivamogga) ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ.

ಬಂಧಿತರನ್ನು ಭದ್ರಾವತಿ ನಗರದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ಸಂಜೆ 4:30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಈ ಇಬ್ಬರು ಯುವಕರು ಮೂರು ಬಿಸ್ಕೆಟ್ ಪ್ಯಾಕೆಟ್‌ಗಳನ್ನು ತಂದಿದ್ದರು. ಅನುಮಾನಗೊಂಡ ಜೈಲು ಸಿಬ್ಬಂದಿ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ಪರಿಶೀಲಿಸಿದಾಗ, ಕಪ್ಪು ಗಮ್ ಟೇಪ್‌ನಲ್ಲಿ ಸುತ್ತಿದ ವಸ್ತುಗಳು ಪತ್ತೆಯಾದವು. ತಪಾಸಣೆ ಮಾಡಿದಾಗ ಅವುಗಳಲ್ಲಿ 1 ಗಾಂಜಾ ಪ್ಯಾಕೆಟ್ ಮತ್ತು 2 ಸಿಗರೇಟ್ ಪ್ಯಾಕೆಟ್‌ಗಳು ಇರುವುದು ದೃಢಪಟ್ಟಿದೆ. ಇದನ್ನೂ ಓದಿ: ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ

ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ ಜೈಲು ಸಿಬ್ಬಂದಿ ಆರೋಪಿಗಳನ್ನು ತುಂಗಾ ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೇಂದ್ರ ಜೈಲು ಅಧೀಕ್ಷಕ ಡಾ.ರಂಗನಾಥ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಂಧಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಪ್ರತಿದಿನ ಅಕೌಂಟ್‌ಗೆ 200 ರೂ. ಹಾಕಿ ಗಾಳ – ಉದ್ಯಮಿಗೆ 7.84 ಲಕ್ಷ ವಂಚನೆ!

Share This Article