ದತ್ತಮಾಲಾ ಅಭಿಯಾನ – 2 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

Public TV
1 Min Read

ಚಿಕ್ಕಮಗಳೂರು: ಈ ವೀಕೆಂಡ್‍ನಲ್ಲಿ ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಪ್ರದೇಶದಲ್ಲಿ ಓಡಾಡಲು ದತ್ತ ಮಾಲಾಧಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಳ್ಳಯ್ಯನಗಿರಿ, ದತ್ತಪೀಠ, ದತ್ತಪೀಠ, ಗಾಳಿಕೆರೆ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ ತಾಣಗಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ದತ್ತಮಾಲಾಧಾರಿಗಳು ಏಳು ದಿನಗಳ ವ್ರತಾಚರಣೆಯಲ್ಲಿ ಇರಲಿದ್ದಾರೆ. ಈ ಬಾರಿ ದತ್ತ ಮಾಲಾ ಅಭಿಯಾನದಲ್ಲಿ ಬಿಜೆಪಿ ನಾಯಕರು ಸಹ ಭಾಗವಹಿಸಲಿದ್ದಾರೆ. ಜಿಲ್ಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​​ ಮಾಡಲಿದ್ದಾರೆ.

Share This Article