ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ

Public TV
1 Min Read

ಪಾಟ್ನಾ: ಬಿಹಾರದ (Bihar) ಸರನ್ ಜಿಲ್ಲೆಯ ಸರ್ಯು ನದಿಯಲ್ಲಿ (Saryu River) ಬುಧವಾರ ದೋಣಿ ಮುಳುಗಿ (Boat Capsizes)  ಇಬ್ಬರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 7 ಮಂದಿ ನಾಪತ್ತೆಯಾಗಿದ್ದಾರೆ. ಇಬ್ಬರು ಮಹಿಳೆಯರ ದೇಹಗಳನ್ನು ಹೊರತೆಗೆಯಲಾಗಿದೆ. ದೋಣಿಯಲ್ಲಿದ್ದ 9 ಮಂದಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಪತ್ತೆಯಾಗಿರುವ 7 ಮಂದಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಮಾನ್ಯಕ್ಕಿಂತ ಮೂರು ಪಟ್ಟು ಹೆಚ್ಚು ಹೃದಯಾಘಾತ – ಅಕ್ಕಿರಾಜ ಖ್ಯಾತಿಯ ಗಂಡಾನೆ ಸಾವು

ಘಟನೆ ಕುರಿತು ಸರನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಪ್ರತಿಕ್ರಿಯಿಸಿ, ಸಂಜೆ 6.30ರ ಸುಮಾರಿಗೆ 18 ಜನರನ್ನು ಹೊತ್ತಿದ್ದ ದೋಣಿಯೊಂದು ಮಾಂಝಿ ಬ್ಲಾಕ್‍ನ ಮತಿಯಾರ್ ಘಾಟ್ ಬಳಿಯ ಸರ್ಯು ನದಿಯಲ್ಲಿ ಮುಳುಗಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಮೃತರ ಗುರುತು ಪತ್ತೆಗೆ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಯಾವ ಕಾರಣದಿಂದ ಈ ಘಟನೆ ನಡೆದಿದೆ ಎಂಬುದರ ಬಗ್ಗೆ ತನಿಖೆ ತನಿಖೆ ನಡೆಯುತ್ತಿದೆ. ಇದು ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡನೇ ದೊಡ್ಡ ದೋಣಿ ದುರಂತವಾಗಿದೆ.

ಸೆಪ್ಟೆಂಬರ್ 14 ರಂದು ಮುಜಾಫರ್‍ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ದೋಣಿಯೊಂದು ಮುಳುಗಿ 15ಕ್ಕೂ ಹೆಚ್ಚು ಮಕ್ಕಳು ಮುಳುಗಿ ಸಾವನ್ನಪ್ಪಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್