Uttar Pradesh | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ದುರ್ಮರಣ, ಐವರಿಗೆ ಗಾಯ

Public TV
1 Min Read
Uttar Pradesh Firecracker Factory Explosion 1 1

ಲಕ್ನೋ: ಇಲ್ಲಿನ ಗುಡಂಬಾ (Gudamba) ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಸ್ಫೋಟ (Blast) ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಗುಡಂಬಾದ ಬೆಹ್ತಾ (Behta) ಪ್ರದೇಶದಲ್ಲಿ ಭಾನುವಾರಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅನಿಂದ್ಯ ವಿಕರಂ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ, ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಮೂವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾ ಕಮ್ಯುನಿಸ್ಟ್‌ ಪಕ್ಷದ ಪ್ರಬಲ ನಾಯಕ, ಜಿನ್‌ಪಿಂಗ್‌ ಆಪ್ತಮಿತ್ರನನ್ನ ಭೇಟಿಯಾದ ಮೋದಿ

ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ತಕ್ಷಣವೇ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಗಣೇಶನ ಪ್ರತಿಷ್ಠಾಪನೆ; ಭಾವೈಕ್ಯತೆ ಮೆರೆದ ಗ್ರಾಮಸ್ಥರು

Share This Article